ಉಡುಪಿಯಲ್ಲಿ ರಥಬೀದಿ ಗೆಳೆಯರ ಹೊಸ ನಾಟಕ ತರಬೇತಿ ಉದ್ಘಾಟನೆ

0
12

ಉಡುಪಿ: ರಥಬೀದಿ ಗೆಳೆಯರು (ರಿ.) ಉಡುಪಿ ಸಾಂಸ್ಕೃತಿಕ ವೇದಿಕೆ ಪ್ರಸ್ತುತ ಪಡಿಸುವ ಹೊಸ ನಾಟಕದ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಭಾರತೀಯ ರೆಡ್ ಕ್ರಾಸ್ ಸಭಾಭವನದಲ್ಲಿ ನಡೆಯಿತು. ಉಡುಪಿ ರಂಗಭೂಮಿಯಲ್ಲಿ ನಾಲ್ಕು ದಶಕಗಳ ಕಾಲ ರಂಗನಟನಾಗಿ ಮೆರೆದ ಹಿರಿಯ ರಂಗಕಲಾವಿದ ರಾಜಗೋಪಾಲ್ ಶೇಟ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಗಣನಾಥ್ ಶೆಟ್ಟಿ ಎಕ್ಕಾರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಖ್ಯಾತ ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ ಆಶಯ ಮಾತುಗಳನ್ನಾಡಿದರು. ರಥಬೀದಿ ಗೆಳೆಯರು ಸಂಸ್ಥೆಯ ಅಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಸುಬ್ರಹ್ಮಣ್ಯ ಜೋಷಿ ವಂದಿಸಿದರು.

ನಾಟಕ ವಿಭಾಗದ ಸಂಚಾಲಕ ಸಂತೋಷ್ ನಾಯಕ್ ಪಟ್ಲ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಂಸ್ಥೆಯ ಉಪಾಧ್ಯಕ್ಷರಾದ ಸಂತೋಷ್ ಬಲ್ಲಾಳ್, ಕೋಶಧಿಕಾರಿ ವೇದವ್ಯಾಸ ಭಟ್, ಸದಸ್ಯರಾದ ಅನಂತರಾಮ ನಾಯಕ್, ರಾಜು ಮಣಿಪಾಲ್, ಜ್ಯೋತಿ ನಾಯಕ್, ದಿವಾಕರ್ ಕಟೀಲ್ ಉಪಸ್ಥಿತರಿದ್ದರು.