ಅಮೃತಭಾರತಿ ವಿದ್ಯಾಲಯದಲ್ಲಿ ಸಂಸ್ಕೃತ ಸಂಭಾಷಣಾ ಶಿಬಿರದ ಉದ್ಘಾಟನೆ

0
12

ಹೆಬ್ರಿ : ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂಸ್ಕೃತ ಸಂಭಾಷಣಾ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು.
ಭಾರತೀಯರು ವಿವಿಧ ಭಾಷೆಗಳನ್ನು ತಿಳಿದವರು ಮತ್ತು ಮಾತನಾಡುವವರು ಆದ್ದರಿಂದ ಎಲ್ಲಾ ಭಾಷೆಗಳ ಮಾತೃಭಾಷೆ ಸಂಸ್ಕೃತ ಭಾಷೆಯಾಗಿದೆ.

ಸಂಸ್ಕೃತ ಭಾಷೆಯ ಮಹತ್ವವನ್ನು ತಿಳಿಯಬೇಕಾದರೆ ಅದರ ಅಧ್ಯಯನ ಅಗತ್ಯವಿದೆ ಈ ನಿಟ್ಟಿನಲ್ಲಿ ಸಂಸ್ಕೃತ ಸಂಭಾಷಣಾ ಶಿಬಿರದ ಅಗತ್ಯವಿದೆ ಎಂದು ಸಂಸ್ಥೆಯ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ತಿಳಿಸಿದರು.

ಸಂಸ್ಥೆಯ ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್ ಕಾರ್ಯಕ್ರಮ ಉದ್ಘಾಟಿಸಿದರು. ಶಿಬಿರದ ಸಂಚಾಲಕಿ ಸಂಸ್ಥೆಯ ಪೂರ್ವ ವಿದ್ಯಾರ್ಥಿನಿ ಪ್ರಣಮ್ಯಾ.ಕೆ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here