ಮೂಡುಬಿದಿರೆಯಲ್ಲಿ ಸೆ.6ರಂದು ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ 7ನೇ ಶಾಖೆಯ ಶುಭಾರಂಭ

0
40

ಮೂಡುಬಿದಿರೆ : ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ.) ಇದರ 7ನೇ ಶಾಖೆಯ ಶುಭಾರಂಭ ಸಮಾರಂಭ ಸೆಪ್ಟೆಂಬರ್ 6ರಂದು ರವಿವಾರ ಮೂಡುಬಿದಿರೆಯಲ್ಲಿ ನಡೆಯಲಿದೆ.

ಮೂಡುಬಿದಿರೆಯ 1ನೇ ಮಹಡಿ, ಪ್ರಭು ಕಾಂಪ್ಲೆಕ್ಸ್, ಸರ್ಕಾರಿ ಆಸ್ಪತ್ರೆ ರಸ್ತೆಯಲ್ಲಿ ಬೆಳಗ್ಗೆ 10.30ಕ್ಕೆ ನೂತನ ಶಾಖೆಯ ಶುಭಾರಂಭ ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್, ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ ಹಾಗೂ ರಾಮಕೃಷ್ಣ ಸಂಘ, ಮೂಡುಬಿದಿರೆಯ ಅಧ್ಯಕ್ಷ ಪ್ರೇಮಾನಂದ ಕೆ.ಎಸ್. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮಾಜಿ ಸಚಿವರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಜಿ. ಕೃಷ್ಣ ಪಾಲೇಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಂಘದ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ನಿರ್ದೇಶಕರು ಹಾಗೂ ಸಿಬ್ಬಂದಿ ಉಪಸ್ಥಿತರಿರುವರು.

ಸಹಕಾರ ಕ್ಷೇತ್ರದ ಸೇವೆಯನ್ನು ವಿಸ್ತರಿಸುವ ಉದ್ದೇಶದಿಂದ ಆರಂಭಗೊಳ್ಳುತ್ತಿರುವ ನೂತನ ಶಾಖೆಯ ಶುಭಾರಂಭ ಸಮಾರಂಭದಲ್ಲಿ ಸದಸ್ಯರು, ಗ್ರಾಹಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಆಡಳಿತ ಮಂಡಳಿ ಮನವಿ ಮಾಡಿದೆ.