ಲೇಡಿಹಿಲ್ ವಿಕ್ಟೋರಿಯಾ ಪ್ರೌಢಶಾಲೆಯಲ್ಲಿ ದಿನಾಂಕ 19.10.2024ರಂದು ವಸ್ತುಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನೇರವೇರಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಯುವ ಲೇಖಕಿ ಕುಮಾರಿ. ರಿಷಲ್ ಫೆರ್ನಾಂಡಿಸ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಆಸಕ್ತಿಯಾನುಸಾರ ತಮ್ಮಲ್ಲಿರುವ ಪ್ರತಿಭೆಗಳನ್ನು ಅಭಿವ್ಯಕ್ತಿಪಡಿಸಲಿರುವ ಅವಕಾಶಗಳನ್ನು ಪೂರ್ಣವಾಗಿ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ವಿಕ್ಟೋರಿಯ ಸಂಯುಕ್ತ ಪದವಿ ಪೂರ್ವ ಕಾಲೇಜು ಸಂಪೂರ್ಣ ಸಹಕಾರ ಪ್ರೋತ್ಸಾಹವನ್ನು ನೀಡುತ್ತಿದೆ ಎಂದು ಹೇಳಿದರು. ಜಂಟಿ ಕಾರ್ಯದರ್ಶಿ ಭಗಿನಿ ವೈಲೆಟ್ ಎ.ಸಿ. ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರಾಂಶುಪಾಲೆ ಭಗಿನಿ ಉಜ್ವಲ, ಉಪಮುಖ್ಯೋಪಾಧ್ಯಾಯಿನಿ ಭಗಿನಿ ಪುಷ್ಪ ಪಿಂಟೊ ಎ.ಸಿ. ಹಾಗೂ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಧನಲಕ್ಷ್ಮಿ ಅವರು ವೇದಿಕೆ ಮೇಲೆ ಆಸಿನರಾಗಿದ್ದರು.