ಕೋಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

0
6

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆಯುವ ಕೋಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕೋಣಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಮತಿ ಗ್ರೇಟಾ ರವಿಕಿರಣ್ ಕೋಸ್ತಾ ರವರು ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಇಂತಹ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಪ್ರಧಾನವೇದಿಕೆಯಾಗಿದೆ ಇದರ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿ ಪಡೆಯಬೇಕು ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆಯನ್ನು ಶಾಲಾ SDMC ಅಧ್ಯಕ್ಷರಾದ ಕೃಷ್ಣ ಪೂಜಾರಿ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಅಕ್ಷರ ದಾಸೋಹದ ತಾಲೂಕು ನಿರ್ದೇಶಕರಾದ ಚಂದ್ರನಾಯ್ಕ್, ಶಿಕ್ಷಣ ಸಂಯೋಜಕ ನಾರಾಯಣ್ ಮರಾಟೆ, ವಿವಿಧ ಶಿಕ್ಷಕ ಸಂಘಗಳ ಅಧ್ಯಕ್ಷರಾದ ಶೇಖರ್ ಪೂಜಾರಿ, ಪ್ರದೀಪ್ ಕುಮಾರ್ ಶೆಟ್ಟಿ, ಪಿಯೂಸ್ ಡಿಸೋಜ, ಸುಭಾಷ್, ಶ್ರೀನಾಥ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಾಗರಾಜ ಆಚಾರ್ಯ ನಿವೃತ್ತ ಶಿಕ್ಷಕರಾದ ಜೂಜೆ ಡಿಸೋಜ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಶಾಲಾ ಮುಖ್ಯ ಶಿಕ್ಷಕಿ ಸೌಪರ್ಣಿಕಾ ಸ್ವಾಗತಿಸಿದರು.

ಕೋಣಿ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಭಾನ್ವಿತ ಶಿಕ್ಷಕಿ ಸುಮನಾ ಎನ್ ಪ್ರಾಸ್ತಾವಿಕ ಮಾತನಾಡಿದರು, ಶಿಕ್ಷಕ ಅಶೋಕ್ ಶೆಟ್ಟಿ, ಶಿವಾನಂದ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕಿ ತಾರಾದೇವಿ ವಂದಿಸಿದರು ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್ ಶೇಟ್ ಸಹಕರಿಸಿದರು.