ಮೂಡು ಪೆರಂಪಳ್ಳಿ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ನೂತನ ನದಿ ಸ್ನಾನ ಘಟ್ಟ ಲೋಕಾರ್ಪಣೆಯನ್ನು ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಹಾಗೂ ದೇವಸ್ಥಾನದ ಪ್ರಮುಖರು ಉಡುಪಿಯ ಜೀವನಾಡಿಯಾಗಿರುವ ಸ್ವರ್ಣ ನದಿಗೆ ಬಾಗಿನ ಸಮರ್ಪಣೆ ಮಾಡುವ ಮೂಲಕ ಲೋಕಾರ್ಪಣೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಇತಿಹಾಸ ಪ್ರಸಿದ್ಧ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ನದಿ ಸ್ನಾನ ಘಟ್ಟ ಹಲವು ವರ್ಷಗಳಿಂದ ತೀವ್ರ ನದಿ ಕೊರೆತದಿಂದ ಹಾನಿಗೀಡಾಗಿ, ಪ್ರತಿವರ್ಷ ಕೃಷ್ಣಂಗಾರಕ ಚತುರ್ದಶಿಯಂದು ವಿವಿಧ ರಾಜ್ಯಗಳಿಂದ ತೀರ್ಥಸ್ನಾನಕ್ಕೆ ಆಗಮಿಸುವ ಸಾವಿರಾರು ಭಕ್ತರಿಗೆ ಸಮಸ್ಯೆಗಳ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಯ ಮನವಿಯಂತೆ ಸಣ್ಣ ನೀರಾವರಿ ಇಲಾಖೆಯ ಮೂಲಕ 2.25 ಕೋಟಿ ಅನುದಾನ ಒದಗಿಸಿ ಇಂದು ಕೃಷ್ಣಂಗಾರಕ ಚತುರ್ದಶಿಯಂದೇ ಉಡುಪಿಯ ಜೀವನಾಡಿಯಾಗಿ ಕುಡಿಯುವ ನೀರು, ಕೃಷಿ ಚಟುವಟಿಕೆಗೆ ಮೂಲ ಆಸರೆಯಾಗಿರುವ ಸ್ವರ್ಣ ನದಿಗೆ ದೇವಸ್ಥಾನದ ವತಿಯಿಂದ ಬಾಗಿನ ಸಮರ್ಪಣೆ ಮಾಡುವ ಮೂಲಕ ನೂತನ ಸ್ನಾನ ಘಟ್ಟದ ಲೋಕಾರ್ಪಣೆ ಗೊಳಿಸಲಾಗಿದ್ದು ಮುಂದಿನ ದಿನಗಳಲ್ಲಿಯೂ ದೇವಸ್ಥಾನದ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಸಹಕಾರ ನೀಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಗಣ್ಯರಾದ ಅಜಿತ್ ಪೈ, ರಮೇಶ್ ರಾವ್, ಬಾಲಾಜಿ ರಾಘವೇಂದ್ರ ಆಚಾರ್ಯ, ಯುವ ಬ್ರಾಹ್ಮಣ ಪರಿಷತ್ತಿನ ಚಂದ್ರಕಾಂತ ಕೆ.ಎನ್., ನಾಗರಾಜ ತಂತ್ರಿ, ಹರಿಕೃಷ್ಣ ಶಿವತ್ತಾಯ, ಪ್ರಶಾಂತ ಭಟ್ ಪೆರಂಪಳ್ಳಿ, ಅನಿಟ ಬೆಲಿಂಡಾ ಡಿಸೋಜಾ, ಮಂಜುನಾಥ ಮಣಿಪಾಲ, ಸುಮಾ, ವಿಜಯ ಪೂಜಾರಿ, ಶ್ರೀ ಗಣಪತಿ ಭಟ್, ವಾದಿರಾಜ ಆಚಾರ್ಯ, ಬಿಜೆಪಿ ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಶಶಾಂಕ್ ಶಿವತ್ತಾಯ, ಗೋಪಾಲಾಚಾರ್ ಸೇರಿದಂತೆ ವಿದ್ವಾಂಸರು ಹಾಗೂ ಗಣ್ಯರು ಉಪಸ್ಥಿತರಿದ್ದರು.

