ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಸಂಸ್ಥಾಪಕರು,ವ್ಯವಸ್ಥಾಪಕ ಟ್ರಸ್ಟಿ ಹಾಗೂ ವಿವೇಕಾನಂದ ತಾಂತ್ರಿಕ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ|ಶ್ರೀಶ ಭಟ್ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಕೃತಕ ಬುದ್ಧಿಮತ್ತೆ ವೇಗವಾಗಿ ಬೆಳೆಯುತ್ತಿರುವ ಇಂದಿನ ಯುಗದಲ್ಲಿ ವಿದ್ಯಾರ್ಥಿಗಳು ಅದಕ್ಕೆ ಹೊಂದಿಕೊಳ್ಳುವುದರ ಜೊತೆಗೆ ತಮ್ಮದೇ ಆದ ಸೃಜನಶೀಲತೆ, ಕೌಶಲ್ಯ, ತಾರ್ಕಿಕ ಚಿಂತನೆ ಮತ್ತು ಸಮಸ್ಯೆ ಪರಿಹರಿಸುವ ಸಾಮರ್ಥ್ಯಗಳನ್ನು ಬೆಳೆಸಿಕೊಳ್ಳಬೇಕು. ವಿಜ್ಞಾನ ಸಂಘವು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ, ಸಂವಹನ ಕೌಶಲ್ಯ ಹಾಗೂ ವಿವಿಧ ಸಾಮರ್ಥ್ಯಗಳನ್ನು ಬೆಳೆಸಿಕೊಳ್ಳಲು ಉತ್ತಮ ವೇದಿಕೆಯಾಗಿದೆ .ಕೃತಕ ಬುದ್ಧಿಮತ್ತೆಯಿಂದ ಸುಲಭವಾಗಿ ಬದಲಿಸಲಾಗದ ಸೃಜನಶೀಲತೆ, ಕೌಶಲ್ಯ ಮತ್ತು ತಾರ್ಕಿಕ ಸಾಮರ್ಥ್ಯಗಳನ್ನು ಬೆಳೆಸಿಕೊಳ್ಳಲು ಜೀವನದಲ್ಲಿ ಶಿಸ್ತು ಅತ್ಯಂತ ಅಗತ್ಯ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಮ್ ವಹಿಸಿದ್ದರು. ವಿಜ್ಞಾನ ಸಂಘದ ಸಂಯೋಜಕರಾದ ಮಮತಾ ಶೆಟ್ಟಿ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.ವಿದ್ಯಾರ್ಥಿನಿ ಕೃತಿ ಕೆ ಸ್ವಾಗತಿಸಿ, ವಂದಿಸಿ,ನಿರೂಪಿಸಿದರು.

