Monday, December 2, 2024
Homeಬೈಂದೂರುಸಿಟಿ ಪಾಯಿಂಟ್‌ನಲ್ಲಿ ಅಜಿನೋರಾ ಸಂಸ್ಥೆಯ ನೂತನ ಶಾಖೆ ಉದ್ಘಾಟನಾ ಕಾರ್ಯಕ್ರಮ

ಸಿಟಿ ಪಾಯಿಂಟ್‌ನಲ್ಲಿ ಅಜಿನೋರಾ ಸಂಸ್ಥೆಯ ನೂತನ ಶಾಖೆ ಉದ್ಘಾಟನಾ ಕಾರ್ಯಕ್ರಮ

ಕೌಶಲ್ಯಭರಿತ ಮಾನವ ಸಂಪನ್ಮೂಲಗಳಿಂದ ದೇಶದ ಪ್ರಗತಿ
ಬೈಂದೂರಿನಲ್ಲಿ ಅಜಿನೋರಾ ಸಂಸ್ಥೆಯ ಶಾಖೆ ಉದ್ಘಾಟಿಸಿ ಶಾಸಕ ಗಂಟಿಹೊಳೆ

ಬೈಂದೂರು ಕೌಶಲ್ಯಭರಿತ ಮಾನವ ಸಂಪನ್ಮೂಲಗಳಿಂದ ದೇಶದ ಪ್ರಗತಿ ಸಾಧ್ಯವಾಗುತ್ತದೆ ಎಂಬ ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾನವ ಸಂಪನ್ಮೂಲಗಳ ಸಮರ್ಪಕ ಬಳಕೆಗಾಗಿ ಕೌಶಲ್ಯಭರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತದೆ, ಇದನ್ನು ಯುವ ಜನಾಂಗ ಸದುಪಯೋಗಪಡಿಸಿಕೊಂಡು ವಿದೇಶಗಳಲ್ಲಿ ಉತ್ತಮ ಉದ್ಯೋಗಗಿಟ್ಟಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಶನಿವಾರ ಇಲ್ಲಿನ ಸಿಟಿ ಪಾಯಿಂಟ್‌ನಲ್ಲಿ ಅಜಿನೋರಾ ಸಂಸ್ಥೆಯ ನೂತನ ಶಾಖೆ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿ.ಪಂ. ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಮಾತನಾಡಿ, ಕೇವಲ ರಸ್ತೆ, ಸೇತುವೆಗಳನ್ನು ನಿರ್ಮಿಸುವುದು ಮಾತ್ರ ಅಭಿವೃದ್ಧಿ ಅಲ್ಲ, ಅದರೊಂದಿಗೆ ಇಲ್ಲಿನ ಮಾನವ ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಂಡು ಅವರಿಗೆ ಕೌಶಲ್ಯಭರಿತ ಶಿಕ್ಷಣ ನೀಡಿ ಉದ್ಯೋಗ ಒದಗಿಸಿಕೊಡುವ ಕೆಲಸವಾಗಬೇಕು, ಆಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಬೈಂದೂರಿನಂತಹ ಗ್ರಾಮೀಣ ಭಾಗಗಳಲ್ಲಿ ಪ್ರತಿಭೆಗಳಿಗೆ ಬರವಿಲ್ಲ, ಇಲ್ಲಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕೆಲಸವಾಗಬೇಕು ಎಂದ ಅವರು ಆ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಅಜಿನೋರಾ ತರಬೇತಿ ಸಂಸ್ಥೆ ಗ್ರಾಮೀಣ ಪ್ರದೇಶದಲ್ಲಿ ಶಾಖೆ ತೆರೆದಿರುವುದು ಈ ಭಾಗದ ಯುವ ಜನಾಂಗಕ್ಕೆ ಸಾಕಷ್ಟು ಅನುಕೂಲವಾಗಲಿದೆ. ಈ ಸಂಸ್ಥೆಯ ಮೂಲಕ ಇಲ್ಲಿನ ಯುವಕ ಯುವತಿಯರು ಉತ್ತಮ ತರಬೇತಿ ಪಡೆದು ವಿದೇಶಗಳಲ್ಲಿ ಉತ್ತಮ ಉದ್ಯೋಗ ಗಿಟ್ಟಿಸಿಕೊಂಡು, ದುಡಿಮೆಯ ಒಂದಂಶವನ್ನು ಸಮಾಜಕ್ಕೆ ನೀಡಿ ಸಾರ್ಥಕತೆ ಕಂಡುಕೊಳ್ಳಬೇಕು ಎಂದರು.

ಸಂಮೃದ್ಧ ಬೈಂದೂರು ಜನಸೇವಾ ಟ್ರಸ್ಟಿನ ಅಧ್ಯಕ್ಷ ಬಿ.ಎಸ್. ಸುರೇಶ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಇತ್ತೀಚಿಗೆ ಬೈಂದೂರಿನಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದ ಯುವಕ ಯುವತಿಯರ ಪೈಕಿ ಮೊದಲ ಹಂತದಲ್ಲಿ 2 -3೦೦ ಜನರಿಗೆ ತರಬೇತಿ ನೀಡಿ ವಿದೇಶಗಳಲ್ಲಿ ಉದ್ಯೋಗ ಕಲ್ಪಿಸಲಾಗುವುದು, ಮುಂದಿನ ಒಂದು ವರ್ಷದೊಳಗೆ ಸುಮಾರು ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗ ಕಲ್ಪಿಸುವ ಗುರಿಹೊಂದಲಾಗಿದೆ. ಆಯ್ಕೆಯಾದವರು ಗಂಭೀರವಾಗಿ ತರಬೇತಿಯನ್ನು ಪಡೆದು ಕಠಿಣ ಮಾರ್ಗದಲ್ಲಿ ಅಭ್ಯಸಿಸಬೇಕು ಎಂದ ಅವರು ಇದರಲ್ಲಿ ತೇರ್ಗಡೆಯಾದವರಿಗೆ ಅವರ ಶಿಕ್ಷಣ ಆಧರಿಸಿ ವಿದೇಶಗಳಲ್ಲಿ ಉದ್ಯೋಗ ಒದಗಿಸಲಾಗುವುದು ಎಂದರು. ತರಬೇತಿ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಭದ್ರತಾ ಠೇವಣೆಗಳನ್ನು ತೆಗೆದುಕೊಂಡು ಅವರು ಉತ್ತೀರ್ಣರಾಗಿ ವಿದೇಶಗಳಲ್ಲಿ ಉದ್ಯೋಗ ಪಡೆದ ಬಳಿಕ ಅದನ್ನು ಹಿಂತಿರುಗಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಮಾಜಿ ಆಡಳಿತ ಧರ್ಮದರ್ಶಿ ಕೃಷ್ಣಪ್ರಸಾದ ಅಡ್ಯಂತಾಯ ನೂತನ ಶಾಖೆಯನ್ನು ಉದ್ಘಾಟಿಸಿದರು.

ಕೇಂದ್ರ ಕೌಶಲ್ಯಾಭಿವೃದ್ಧಿ ನಿಗಮದ ಸಲಹಾ ಸಮಿತಿಯ ಸದಸ್ಯ ಡಾ. ಸಿ.ಎಂ. ಸಿಂಗ್, ಅಜಿನೋರಾ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಅಜೀ ಮ್ಯಾಥ್ಯೂ, ನಿರ್ದೇಶಕ ಅಜಿ ಅಗಸ್ಟೆನ್, ಉದ್ಯಮಿ ಕೆ. ವೆಂಕಟೇಶ ಕಿಣಿ ಮತ್ತಿತರರು ಉಪಸ್ಥಿತರಿದ್ದರು.

ಶರಣ್ಯ ಜಾಕೋಬ್ ಸ್ವಾಗತಿಸಿದರು. ಪತ್ರಕರ್ತ ಅರುಣಕುಮಾರ ಶಿರೂರು ನಿರೂಪಿಸಿದರು.

RELATED ARTICLES
- Advertisment -
Google search engine

Most Popular