ಇಂದಬೆಟ್ಟು: ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

0
1

ಇಂದಬೆಟ್ಟು :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 09 ರಂದು ನಡೆದ ಇಂದಬೆಟ್ಟು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆಯಲ್ಲಿ ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ರಾಮಣ್ಣ ಗೌಡ ದೇರೆಮಾರು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ವಿಧಾನಪರಿಷತ್ ಪ್ರತಾಪಸಿಂಹ ನಾಯಕ್ ಹಾಗೂ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವರ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು,ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ ಬೈಠಕ್ ನೀಡಿದರು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ ಪ್ರಜ್ವಲ್, ಅಭ್ಯಾಸ ವರ್ಗ ಪ್ರಮುಖ್ ಕೊರಗಪ್ಪ ಗೌಡ ಚಾರ್ಮಾಡಿ, ಮಂಡಲ ಕೋಶಾಧಿಕಾರಿ ಜಯಂತ್ ಗೌಡ ಗುರಿಪಳ್ಳ, ಲಾಯಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಕಾಶ್ ಜೈನ್ ಎಳನೀರು, ಇಂದಬೆಟ್ಟು ಶಕ್ತಿ ಕೇಂದ್ರ ಪ್ರಮುಖ್ ಶ್ರೀಕಾಂತ್.ಎಸ್. ಇಂದಬೆಟ್ಟು, ಇಂದಬೆಟ್ಟು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ, ಜನಪ್ರತಿನಿದಿನಗಳು ಹಾಗೂ ಶಕ್ತಿ ಕೇಂದ್ರ ಪ್ರಮುಖ್, ಅನ್ಯನ್ಯ ಜವಾಬ್ದಾರಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಆನಂದ ಅಡಿಲು ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here