ಯಾವುದೇ ಸಾಧನೆಗೆ ಶಿಕ್ಷಕರೇ ಸ್ಪೂರ್ತಿ: ಸೈನಿಕ ರವೀಂದ್ರ ಪೂಜಾರಿ

0
82

ಕಡಂದಲೆ ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೋತ್ಸವ

ಮೂಡುಬಿದಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಂದಲೆ ಮೈನ್ ಇಲ್ಲಿ 79ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಪ್ರಸ್ತುತ ಭಾರತೀಯ ಸೇನೆಯಲ್ಲಿ ಸೈನಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರವೀಂದ್ರ ಪೂಜಾರಿ ಇವರು ಧ್ವಜಾರೋಹಣ ನೆರವೇರಿಸಿದರು.

ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅವರು ತಮ್ಮ ಶಾಲಾ ದಿನಗಳ ನೆನಪುಗಳನ್ನು ಹಂಚಿಕೊಂಡು, ಯಾವುದೇ ಸಾಧನೆಗೆ ವಿದ್ಯೆ ನೀಡಿದ ಶಿಕ್ಷಕರೇ ಸ್ಫೂರ್ತಿದಾಯಕರು. ತಮ್ಮ ಸಾಧನೆಗೆ ಪ್ರೇರಣೆ ನೀಡಿದ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಹರೀಶ್ ಶೆಟ್ಟಿ ಹೋಯಿಗೆ ಮನೆ ಮಾತನಾಡಿ, ಶಾಲೆಯ ಅಭಿವೃದ್ಧಿಗಾಗಿ ಹಳೆ ವಿದ್ಯಾರ್ಥಿ ಸಂಘವು ಸದಾ ಬೆಂಬಲ ನೀಡುತ್ತದೆ ಎಂದು ಭರವಸೆ ನೀಡಿದರು. ಉಪಾಧ್ಯಕ್ಷರಾದ ವೆಂಕಟೇಶ್ ನಾಯಕ್ ಅವರು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಕ್ಷಣಕ್ಕೆ ಆದ್ಯತೆಯನ್ನು ನೀಡಿ, ಶಿಸ್ತು ಮತ್ತು ಸಂಯಮ ಬೆಳೆಸಿಕೊಂಡು ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸುಷ್ಮಾ ಶೆಟ್ಟಿ ಅವರು, ಪೋಷಕರು ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಸದಾ ಗಮನಿಸಬೇಕು ಹಾಗೂ ಮಕ್ಕಳ ಕಲಿಕೆಗೆ ಸಮಯ ನೀಡಬೇಕು ಎಂದು ಒತ್ತಿ ಹೇಳಿದರು.

ಸ್ಪರ್ಧೆ-ಬಹುಮಾನ ವಿತರಣೆ

ಸ್ವಾತಂತ್ರೋತ್ಸವದ ಅಂಗವಾಗಿ ಭಾಷಣ ಸ್ಪರ್ಧೆ, ದೇಶಭಕ್ತಿ ಗಾಯನ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಮತ್ತು ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳಿಂದ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಹರೀಶ್ ಶೆಟ್ಟಿ ಹೋಯಿಗೆ ಮನೆ ಅವರು ಉಪಹಾರ ಮತ್ತು ಪಾನಿಯ ಒದಗಿಸಿದರು. ಸಂತೋಷ್ ಶೆಟ್ಟಿ ಪರಾರಿ, ಕಡಂದಲೆ ಜಗದೀಶ್ ಶೆಟ್ಟಿ ಬಲ್ಲಾಡಿ, ಕಡಂದಲೆ ಶ್ರೀ ರವೀಂದ್ರ ಪೂಜಾರಿ, ದಯಾನಂದ ನಾಯಕ, ರಾಘು ಪುರುಷ ಗ್ರಾಮ ಪಂಚಾಯತ್, ಪಾಲಡ್ಕ ಇವರುಗಳು ವತಿಯಿಂದ ಎಲ್ಲರಿಗೂ ಸಿಹಿತಿಂಡಿಗಳನ್ನು ವಿತರಿಸಲಾಯಿತು.

ಮುಖ್ಯ ಶಿಕ್ಷಕರಾದ ಲೇಡಿಯ ಸೆರವೂ ಸ್ವಾಗತಿಸಿದರು, ಸಹ ಶಿಕ್ಷಕರಾದ ಎಲಿಜಾ ಪೌಲಿನ್ ವಂದಿಸಿದರು. ಸಹ ಶಿಕ್ಷಕ ಶರಣಯ್ಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here