ಮೂಡುಬಿದಿರೆ ಆಟೋರಿಕ್ಷಾ ಚಾಲಕ-ಮಾಲಕರ ಸಂಘದಿಂದ ಸ್ವಾತಂತ್ರ್ಯೋತ್ಸವ : ನೂತನ ವಕೀಲರ ಸಂಘದ ಅಧ್ಯಕ್ಷರಿಗೆ ಗೌರವ

0
15

ಆಟೋರಿಕ್ಷಾ ಚಾಲಕ ಮಾಲಕರ ಸಂಘ. ರಿ. ಮೂಡುಬಿದರೆ, ಇದರ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ ಯ ಸಂದರ್ಭದಲ್ಲಿ ಮೂಡಬಿದಿರೆ ವಕೀಲರ ಸಂಘದ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಶರತ್ ಡಿ ಶೆಟ್ಟಿ, ಇವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ಪೊಲೀಸ್‌ ಉಪನಿರೀಕ್ಷಕರು ಪ್ರತಿಭಾ ಕೆ ಸಿ ಹಾಗೂ ಉದ್ಯಮಿ ಹೈದರ್ ಅಲಿ ಸಂಗಬೆಟ್ಟು, ಸಂಘದ ಅಧ್ಯಕ್ಷ ದೀಪಕ್ ರಾಜ್, ಭೂಮಿ ಎಸ್ ಶೆಟ್ಟಿ, ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು. ಕೆ ಪ್ರದೀಪ್ ರೈ ಕಾರ್ಯಕ್ರಮ ನಿರೂಪಿಸಿದರು.