ಸ್ವಾತಂತ್ರ್ಯೋತ್ಸವ: ಕಾವೇರಿ ನಿವಾಸದಲ್ಲಿ ಧ್ವಜಾರೋಹಣ ನಡೆಸಿದ ಸಿಎಂ ಸಿದ್ದರಾಮಯ್ಯ

0
142

ಬೆಂಗಳೂರು: 79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಧ್ವಜಾರೋಹಣ ಮಾಡಿದರು. ನಂತರ ಮಾಣೆಕ್ ಷಾ ಪರೇಡ್ ಮೈದಾನಕ್ಕೆ ತೆರಳಿ ಅಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ಜೀಪ್​ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ನಂತರ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯ ಕ್ಕಾಗಿ ಹೋರಾಡಿದ ಎಲ್ಲರನ್ನೂ ಧನ್ಯತಾಭಾವದಿಂದ ಸ್ಮರಿಸೋಣ ಎಂದರು. ಪಹಲ್ಗಾಮ್ ದಾಳಿಯಲ್ಲಿ ಮಡಿದವರು, ಪಾಕ್ ವಿರುದ್ಧ ಹೋರಾಡಿ ಮಡಿದವರಿಗೂ ಸಿದ್ದರಾಮಯ್ಯ ಗೌರವ ಸಲ್ಲಿಸಿದರು.

LEAVE A REPLY

Please enter your comment!
Please enter your name here