ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಹೆಬ್ರಿ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಸದಾಶಿವ ಸೇರ್ವೆಗಾರ್ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಧ್ವಜಾರೋಹಣ ಗೈದು ಮಾತನಾಡಿ, ನಮಗೆ ದೊರೆತಿರುವ ಈ ಸ್ವಾತಂತ್ರ್ಯ ಸಾಕಷ್ಟು ಜನರ ತ್ಯಾಗ ಬಲಿದಾನದ ಫಲಶ್ರುತಿ. ಈ ಸ್ವಾತಂತ್ರ್ಯ ವನ್ನು ಉಳಿಸಿಕೊಳ್ಳುವುದು ಯುವ ಜನತೆಯ ಕೈಯಲ್ಲಿ ಇದೆ. ಭಾರತ ವಿಶ್ವದ ಬಲಿಷ್ಠ ಶಕ್ತಿಯಾಗಿ ಬೆಳೆಯುತ್ತಿರುವ ಈ ಸಂದರ್ಭದಲ್ಲಿ ಕೆಲವು ವಿದೇಶಿ ಶಕ್ತಿಗಳು ನಮ್ಮ ವಿರುದ್ಧ ಸಂಚು ಹೂಡುವುದನ್ನು ಕಾಣುತ್ತಿದ್ದೇವೆ .ನಾವೆಲ್ಲ ಭಾರತೀಯರು ಅದರ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅಮೃತ ಭಾರತಿ ಟ್ರಸ್ಟ್ ನ ಅಧ್ಯಕ್ಷರಾದ ಸಿಎ ಎಂ. ರವಿ ರಾವ್, ಸ್ಥಾಪಕ ಅಧ್ಯಕ್ಷರಾದ ಸತೀಶ್ ಪೈ , ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಜೇಶ್ ನಾಯಕ್, ವಿದ್ಯಾಲಯದ ಅಧ್ಯಕ್ಷರಾದ ಶ್ರೀ ಶೈಲೇಶ್ ಕಿಣಿ, ಟ್ರಸ್ಟಿಗಳಾದ ಬಾಲಕೃಷ್ಣ ಮಲ್ಯ ,ಯೋಗೀಶ್ ಭಟ್, ಸುಧೀರ್ ನಾಯಕ್, ವಿಷ್ಣುಮೂರ್ತಿ ನಾಯಕ್ ,ಲಕ್ಷ್ಮಣ್ ಭಟ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಸೇರಿದಂತೆ ಎರಡುವರೆ ಸಾವಿರ ಮಂದಿ ಉಪಸ್ಥಿತರಿದ್ದರು. ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.