ರೇಡಿಯೋ ಮಣಿಪಾಲದಲ್ಲಿ ‘ಸ್ವಾತಂತ್ರ್ಯೋತ್ಸವ ವಿಶೇಷ’ ಕಾರ್ಯಕ್ರಮ

0
7

ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್90.4 MHz ಸಮುದಾಯ ಬಾನುಲಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ವಿಶೇಷ ಕಾರ್ಯಕ್ರಮ ಪ್ರಸಾರವಾಗಲಿದೆ.

ಕ್ರಿಶ್ಚಿಯನ್ ಹೈಸ್ಕೂಲ್-ಉಡುಪಿ ಇಲ್ಲಿನ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಆಗಸ್ಟ್ ತಿಂಗಳ 15ರಂದು ಶನಿವಾರ ಮಧ್ಯಾಹ್ನ ಸಮಯ 12.35 ಕ್ಕೆ ಪ್ರಸಾರವಾಗಲಿದೆ ಮತ್ತು ಶನಿವಾರ ಸಂಜೆ 5.15 ಕ್ಕೆ ಮರು ಪ್ರಸಾರವಾಗಲಿದೆ.

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.