ಸುಪ್ರಸಿದ್ದ ಭಾರತೀಯ ಹಿನ್ನೆಲೆ ಗಾಯಕ ಕುನಲ್ ಗಾಂಜಾವಾಲಾ ಇಂದು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ದರುಶನ ಪಡೆದರು.
ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.
ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್. ಪಾಲನ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವರದಿ ವಿನೋದ್ ಶೆಟ್ಟಿ ಉಡುಪಿ

