ಮಂಗಳೂರು : ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ (KRMSS), ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 2026ರ ಆಗಸ್ಟ್ 6ರಂದು ಮಧ್ಯಾಹ್ನ 2.00 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಸಂತ ರವಿದಾಸ್ ಅವರ 650ನೇ ಜನ್ಮ ಜಯಂತಿ ಅಂಗವಾಗಿ “ಭಾರತೀಯ ಸಂತ ಪರಂಪರೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಉಪನ್ಯಾಸಮಾಲೆ” ಕಾರ್ಯಕ್ರಮವನ್ನು ಸನಾ ಸತೀಶ್ ಅವರು ಅಚ್ಚುಕಟ್ಟಾಗಿ ನಿರೂಪಿಸಿದರು. ಸ್ಫೂರ್ತಿ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಡಾ. ಜ್ಯೋತಿ ಅವರು ಎಲ್ಲ ಗಣ್ಯ ಅತಿಥಿಗಳು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳನ್ನು ಹೃತ್ತೂರ್ವಕವಾಗಿ ಸ್ವಾಗತಿಸಿದರು. ನಂತರ ಲಿನಿಷಾ ಅವರು ಮುಖ್ಯ ಅತಿಥಿಗಳ ಪರಿಚಯವನ್ನು ಮಾಡಿಕೊಟ್ಟರು.
ಮುನ್ನುಡಿಯಾಗಿ ಪ್ರೊ. ನಾಗರತ್ನ ರಾವ್ ಅವರು ಭಾರತೀಯ ಸಂತ ಪರಂಪರೆಯ ಮಹತ್ವ ಹಾಗೂ ಸಂತ ರವಿದಾಸ್ ಅವರ ಜೀವನ ಸಂದೇಶವನ್ನು ಪರಿಚಯಿಸಿದರು. ತದನಂತರ ಗಣ್ಯ ಅತಿಥಿಗಳಿಂದ ದೀಪ ಪ್ರಜ್ವಲನ ಹಾಗೂ ಪುಷ್ಪಾರ್ಪಣೆ ನೆರವೇರಿತು.
ಕಾರ್ಯಕ್ರಮವನ್ನು ಭಾಸ್ಕರ್ ರಾವ್ ಕುಕ್ಕುವಳ್ಳಿ ಅವರು ಉದ್ಘಾಟಿಸಿ, ತಮ್ಮ ಉದ್ಘಾಟನಾ ಭಾಷಣದಲ್ಲಿ ಭಾರತೀಯ ಸಂತರ ಚಿಂತನೆಗಳು ಸಮಾಜದಲ್ಲಿ ಸಮಾನತೆ, ಸಹೋದರತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸಿವೆ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪ್ರೊ. ಸುಮಾಟಿ, ಆರ್. ಅವರು “ಭಾರತೀಯ ಸಂತ ಪರಂಪರೆ” ವಿಷಯದ ಕುರಿತು ಉಪನ್ಯಾಸ ನೀಡಿ, ಸಂತ ರವಿದಾಸ್ ಅವರ ಜೀವನ, ಭಕ್ತಿ ಚಳವಳಿ, ಸಾಮಾಜಿಕ ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶವನ್ನು ನೀಡಿದರು.
ಅಧ್ಯಕ್ಷಯ ಭಾಷಣದಲ್ಲಿ ಕಾಲೇಜಿನ ಪ್ರಾಂಶುಪಾಲರು ಭಾರತೀಯ ಸಂಸ್ಕೃತಿ ಮತ್ತು ಸಂತ ಪರಂಪರೆಯ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕೊನೆಯಲ್ಲಿ ದೃಶ್ಯಾ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕರು, ಸಿಬ್ಬಂದಿ ಹಾಗೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಿ ಉಪನ್ಯಾಸದ ಸದುಪಯೋಗವನ್ನು ಪಡೆದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಸಮಾಪ್ತಿಯಾಯಿತು.

