ಆರ್ಎಸ್ಎಸ್ ಚಟುವಟಿಕೆಗಳಿಗೆ ಪರೋಕ್ಷ ನಿಷೇಧ ಹೇರಲು ಹೊರಟಿದ್ದ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಸಲ್ಲಿಸಿದ್ದ ಮನವಿ ಬಗ್ಗೆ ಮಹತ್ವದ ಆದೇಶ ಹೊರಬಿದ್ದಿದೆ. ನವೆಂಬರ್ 4ರಂದು ಈ ಬಗ್ಗೆ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಾಲಯ ಇವತ್ತು ಆ ಬಗ್ಗೆ ತೀರ್ಪು ನೀಡಿದೆ.
ಖಾಸಗಿ ಸಂಸ್ಥೆಗಳು ಸರ್ಕಾರಕ್ಕೆ ಸಂಬಂಧಿಸಿದ ಆಸ್ತಿಯಲ್ಲಿ ಅನುಮತಿಯಿಲ್ಲದೆ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ. ಹೈಕೋರ್ಟ್ ಕಟ್ಟಡ ಖಾಲಿ ಇದೆ ಎಂದು ಅಲ್ಲಿ ಕಾರ್ಯಕ್ರಮ ಮಾಡಲಾಗುವುದಿಲ್ಲ. ಅದೇ ರೀತಿಯಲ್ಲಿ ಸಾರ್ವಜನಿಕ ಸ್ಥಳಗಳ ಬಳಕೆಗೂ ಅನುಮತಿ ಅಗತ್ಯ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸರ್ಕಾರದ ಪರ ವಾದ ಮಂಡಿಸಿದ್ದರು.ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರತಿವಾದಿ ಪರ ಹಿರಿಯ ವಕೀಲರಾದ ಅಶೋಕ್ ಹಾರನಹಳ್ಳಿ, ಪಾರ್ಕ್, ಮೈದಾನ ಎಲ್ಲವೂ ಸರ್ಕಾರದ ಸ್ವತ್ತೆಂದು ಭಾವಿಸಬಾರದು. ಮೈದಾನದಲ್ಲಿ ಕ್ರಿಕೆಟ್ ಆಡಲೂ ಅನುಮತಿ ಬೇಕೆಂಬಂತೆ ನಿಯಮ ತರಲಾಗಿದೆ. ಪೊಲೀಸ್ ಕಾಯ್ದೆಯ ಪ್ರಕಾರ ಕ್ರಮ ಕೈಗೊಳ್ಳುವ ಅಧಿಕಾರ ಜಿಲ್ಲಾ ದಂಡಾಧಿಕಾರಿಗೆ ಮಾತ್ರವಿದೆ. ಏಕಸದಸ್ಯ ಪೀಠದಲ್ಲೇ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಬಹುದಿತ್ತು ಎಂದಿದ್ದರು.ನವೆಂಬರ್ 4ರಂದು ಈ ವಿಚಾರವಾಗಿ ಪರ-ವಿರೋಧ ವಾದ ಆಲಿಸಿದ್ದ ಧಾರವಾಡದ ವಿಭಾಗೀಯ ಪೀಠ

