ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಪು ವಲಯದ 10 ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ

0
9

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ವಿಟ್ಲ ಇದರ ಕೇಪು ವಲಯದ 10 ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ಸೆಪ್ಟೆಂಬರ್ 27 ಭಾನುವಾರ ಶ್ರೀ ಗುರುದೇವ ಕಲ್ಯಾಣ ಮಂಟಪ ಕನ್ಯಾನ ದಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿ ಬಂದು ಸ್ವಸಹ ಸಂಘಗಳ ಕೇಪು ವಲಯ ಅಧ್ಯಕ್ಷ ಗಣೇಶ್ ಮೈರುಗ ವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಚಾಮುಂಡೇಶ್ವರಿ ಕ್ಷೇತ್ರ ಕಣಿಯೂರು ಉದ್ಘಾಟಿಸಿ ಶುಭ ಹಾರೈಸಿ ಮಾತನಾಡಿ ದೇಶದ ಅಭಿವೃದ್ಧಿ ಯಾಗಬೇಕಾದರೆ ಪ್ರತಿ ಹಳ್ಳಿಗಳು ಅಭಿವೃದ್ಧಿ ಹೊಂದಬೇಕು ಈ ದೃಷ್ಟಿಯಲ್ಲಿ ವೀರೇಂದ್ರ ಹೆಗ್ಗಡೆಯವರು ತಮ್ಮ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ಮೂಲಕ ಗ್ರಾಮೀಣ ಪ್ರದೇಶದ ಜನರ ಅಭಿವೃದ್ಧಿಯ ದೂರ ದೃಷ್ಟಿಯ ಯೋಜನೆಗಳು ಬಹಳ ಪ್ರಾಮುಖ್ಯತೆ ವಹಿಸಿದೆ ಎಂದರು.

ಸಾಧ್ವಿ ಶ್ರೀ ಮಾತಾನಂದಮಯಿ, ಶ್ರೀ ಗುರುದೇವ ದತ್ತ ಸಂಸ್ಥಾನಂ ಒಡಿಯೂರು ರವರು ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರಿಸಿ ಆಶೀರ್ವಚನ ನೀಡಿ, ಧರ್ಮಸ್ಥಳ ಹಾಗೂ ಒಡಿಯೂರು ಸಂಸ್ಥೆಗಳ ಮೂಲಕ ನಡೆಸುವಂತಹ ಯೋಜನೆಗಳು ದೇಶದ ಅಭಿವೃದ್ಧಿಯ ದೃಷ್ಟಿಯಲ್ಲಿ ಒಂದು ದೇಹದ ಎರಡು ಕಣ್ಣುಗಳು ಇದ್ದಂತೆ ಎಂದರು .

ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲೆ 2 ರ ನಿರ್ದೇಶಕ ಬಾಬು ನಾಯ್ಕ ರವರು ಯೋಜನೆಯಿಂದ ಸಿಗುವ ಸೌಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ರಾಧಾಕೃಷ್ಣ ಅಡ್ಯಂತಾಯ,ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪದ್ಯಾನ ಇದರ ಆಡಳಿತ ಮುಕ್ತೆಸರರಾದ ಸತ್ಯನಾರಾಯಣ ಭಟ್ ಸೇರಾಜೆ, ಜನಜಾಗ್ರತಿ ವಲಯ ಅಧ್ಯಕ್ಷರಾದ ರಾಧಾಕೃಷ್ಣ ಚೆಲ್ಲಡ್ಕ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಸಮಿತಿ ಅಧ್ಯಕ್ಷ ನವೀನ್ ಚಂದ್ರ, ವಿನೋದ್ ಶೆಟ್ಟಿ ಪಟ್ಲಗುತ್ತು, ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಂತರ ಸದಸ್ಯರಿಂದ ಹಾಗೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಬೇಡಗುಡ್ಡೆ ಒಕ್ಕೂಟದ ಅಧ್ಯಕ್ಷರಾದ ಮೋಹನ್ ಸ್ವಾಗತಿಸಿದರು. ವಲಯದ ಮೇಲ್ವಿಚಾರಕರಾದ ಚಂದ್ರಶೇಖರ್ ವರದಿ ವಾಚಿಸಿದರು, ಶಿರಾಂಕಲ್ಲು ಒಕ್ಕೂಟದ ನೂತನ ಅಧ್ಯಕ್ಷರಾದ ಸಂತೋಷ್ ಕುಮಾರ್ ವಂದಿಸಿದರು. ರೇಣುಕಾ ಕಣಿಯೂರ್ ಕಾರ್ಯಕ್ರಮ ನಿರೂಪಿಸಿದರು