ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಳಿಕೆ ವಲಯದ ಪರಿಯಾಲ್ತಡ್ಕ ಹಾಗೂ ಪುಣಚ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

0
4

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ವಿಟ್ಲ ಇದರ ಅಳಿಕೆ ವಲಯದ ಪರಿಯಾಲ್ತಡ್ಕ ಹಾಗೂ ಪುಣಚ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಸೆಪ್ಟಂಬರ್ 24 ಗುರುವಾರ ಶ್ರೀ ಮಹಿಷಮರ್ದಿನಿ ದೇವಸ್ಥಾನ ಪುಣಚದಲ್ಲಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಅಳಿಕೆ ವಲಯ ಅಧ್ಯಕ್ಷ ರಾಜೇಂದ್ರ ರೈ ಯವರ ಅಧ್ಯಕ್ಷತೆಯಲ್ಲಿ ಜರಗಿತು.

ಶ್ರೀ ಮಹಿಷಮರ್ದಿನಿ ದೇವಸ್ಥಾನದ ಅಧ್ಯಕ್ಷರಾದ ಮಾರಪ್ಪ ಶೆಟ್ಟಿ ಬೈಲುಗುತ್ತು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ ರವರು ಯೋಜನೆ ನಡೆದುಬಂದ ದಾರಿ ಯೋಜನೆ ಕಾರ್ಯಕ್ರಮಗಳು ಅದರ ಉದ್ದೇಶಗಳು ಬ್ಯಾಂಕಿನ ವ್ಯವಸ್ಥೆ ಹಾಗೂ ಪದಾಧಿಕಾರಿಗಳ ಜವಬ್ದಾರಿಯಬಗ್ಗೆ ಮಾಹಿತಿ ಹಂಚಿಕೊಂಡರು.

ಯೋಜನಾಧಿಕಾರಿ ಸುರೇಶ ಗೌಡ,.ಜನಜಾಗೃತಿ ವಲಯಧ್ಯಕ್ಷ ಬಾಲಕೃಷ್ಣ ಕಾರಂತ್, ಶಿಕ್ಷಕ ,ವಿನೋದ ಶೆಟ್ಟಿ, ಒಕ್ಕೂಟದ ಅಧ್ಯಕ್ಷರಾದ ಶಿವಪ್ಪ ಮೂಲ್ಯ. ಕೇಂದ್ರ ಒಕ್ಕೂಟ ಅಧ್ಯಕ್ಷರಾದ ನವೀನ ಚಂದ್ರ ಕಣಂತೂರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎರಡು ಒಕ್ಕೂಟಗಳ ನಿಕಟಪೂರ್ವ ಪದಾಧಿಕಾರಿಗಳು, ನೂತನ ಪದಾಧಿಕಾರಿಗಳು, ಸ್ವಸಹಾಯ ಸಂಘಗಳ ಸದಸ್ಯರು, ಭಾಗವಹಿಸಿದ್ದರು.

ವಲಯದ ಮೇಲ್ವಿಚಾರಕಿ ಮೀನಾಕ್ಷಿ ಸ್ವಾಗತಿಸಿದರು. ಸೇವಾ ಪ್ರತಿನಿಧಿ ರಾಜೇಶ್ವರಿ ಒಕ್ಕೂಟದ ವರದಿ ವಾಚಿಸಿದರು,ಸೇವಾಪ್ರತಿನಿಧಿ ಕಾವ್ಯ ವಂದಿಸಿದರು. ಸವಿತಾ ಮತ್ತು ನಳಿನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.