ಉಡುಪಿ ನಗರಸಭೆಗೆ ಕುಡಿಯುವ ನೀರು ಸರಬರಾಜು ಮಾಡುವ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಣೆಕಟ್ಟಿನ ನೀರಿನ ಪ್ರಸ್ತುತ ನೀರಿನ ಲಭ್ಯತೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈಗಾಗಲೇ ಬಜೆ ಅಣೆಕಟ್ಟಿಗೆ ನೀರಿನ ಒಳಹರಿವು ಆರಂಭಗೊಂಡಿದೆ. ಇದರಿಂದ ನಗರ ಭಾಗಕ್ಕೆ ನಿರಂತರ ನೀರು ಸರಬರಾಜಿಗೆ ಅಗತ್ಯ ಪ್ರಮಾಣದ ನೀರು ಲಭ್ಯವಾಗಿದೆ ಎಂದು ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

