Friday, March 21, 2025
Homeಮೂಡುಬಿದಿರೆಕಡಂದಲೆ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಹಕ್ಕು ಮತ್ತು ಗ್ರಾಮೀಣ ಸೌಲಭ್ಯಗಳ ಬಗ್ಗೆ ಮಾಹಿತಿ

ಕಡಂದಲೆ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಹಕ್ಕು ಮತ್ತು ಗ್ರಾಮೀಣ ಸೌಲಭ್ಯಗಳ ಬಗ್ಗೆ ಮಾಹಿತಿ

ಮೂಡುಬಿದಿರೆ ತಾಲೂಕು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿಯ ಕಡಂದಲೆ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಫೆಬ್ರವರಿ 6 ರಂದು ವಿದ್ಯಾರ್ಥಿ ಹಕ್ಕು, ಶಿಕ್ಷಣ ಹಕ್ಕು, ಗ್ರಾಮೀಣ ಸೌಲಭ್ಯಗಳ ವಿಶೇಷ ಮಾಹಿತಿಯನ್ನು ನೀಡಲಾಯಿತು. ಬೆಂಗಳೂರು ಸೂರ್ಯ ಫೌಂಡೇಶನ್ ನ ಜಿಲ್ಲಾ ಸಂಯೋಜಕ, ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ರಾಜ್ಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಯವರು ಮಾಹಿತಿಯನ್ನು ನೀಡಿದರು. ಅವರು ತಮ್ಮ ಭಾಷಣದಲ್ಲಿ ಸರ್ಕಾರದಿಂದ ದೊರಕುವ ಹಲವಾರು ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಹಾಗೂ ಮನೆಯವರ ಅಭಿವೃದ್ಧಿ ಮಾಡಿಕೊಳ್ಳಲು ವಿನಂತಿಸಿದರು. ಪರಿಸರವನ್ನು ಶುದ್ಧವಾಗಿ, ಸ್ವಚ್ಛವಾಗಿ ಇಡುವುದರಿಂದ ಆಗುವ ಹಲವಾರು ಆರೋಗ್ಯ ಕರ ಅಂಶಗಳನ್ನು ಮನವರಿಕೆ ಮಾಡಿಕೊಟ್ಟರು. ಮುಖ್ಯ ಶಿಕ್ಷಕಿ ಪ್ರತಿಭಾ ಎಂ ಅಧ್ಯಕ್ಷತೆ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರು ಪತ್ರಕರ್ತರಾದ ಜಗದೀಶ್ ಪೂಜಾರಿ ಹಾಜರಿದ್ದರು. ಸತೀಶ್ ಶೆಟ್ಟಿ ಸ್ವಾಗತಿಸಿದರು. ಸುಮನ ಎಚ್.ಎಸ್. ಕಾರ್ಯಕ್ರಮ ನಿರ್ವಹಿಸಿದರು. ಪೌಲಿನ್ ಪಿಂಟೊ ವಂದಿಸಿದರು.

RELATED ARTICLES
- Advertisment -
Google search engine

Most Popular