Monday, December 2, 2024
HomeUncategorizedದಯಾನಂದ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ – ಶೌಚಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆ

ದಯಾನಂದ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ – ಶೌಚಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆ

ರಾಮನಗರ: ಜಿಲ್ಲೆಯ ಹಾರೋಹಳ್ಳಿ  ಸಮೀಪದ ದಯಾನಂದ ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆಯಾಗಿರುವ ಅಮಾನವೀಯ ಘಟನೆಯೊಂದು ನಡೆದಿದೆ.

ಆಸ್ಪತ್ರೆಯ ರೇಡಿಯಾಲಜಿ ಡಿಪಾರ್ಟ್ಮೆಂಟ್ ಬ್ಲಾಕ್‌ನ ಶೌಚಗುಂಡಿಯಲ್ಲಿ ಮಗು ಶವ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಆಗ ತಾನೇ ಜನಿಸಿರುವ ಮಗುವನ್ನು ಟಾಯ್ಲೆಟ್ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಲಾಗಿದೆ.ಬಳಿಕ ಶೌಚಾಲಯದಲ್ಲಿ ನೀರು ಹೋಗದೇ ಕಟ್ಟಿಕೊಂಡ ಹಿನ್ನೆಲೆ ಹೌಸ್ ಕೀಪಿಂಗ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಶೌಚಗುಂಡಿಯಲ್ಲಿ ಮಗು ಶವ ಪತ್ತೆಯಾಗಿದೆ. ಮಗು ಜನನವನ್ನ ಮರೆಮಾಚಲು ಯಾರೋ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.

ಸದ್ಯ ಈ ಸಂಬಂಧ ಆಸ್ಪತ್ರೆ ವೈದ್ಯರು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದು, ಮಗುವಿನ ಡಿಎನ್‌ಎ ವರದಿ ಆಧರಿಸಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

RELATED ARTICLES
- Advertisment -
Google search engine

Most Popular