ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಪೂರ್ವಭಾವಿಯಾಗಿ ಆಯೋಜಿಸಿದ್ದ ಒಳಕಾಡು ವಾರ್ಡಿನ ಕಾರ್ಯಕರ್ತರ ಸಭೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಸಂಕಲ್ಪದೊಂದಿಗೆ ಪಕ್ಷದ ಸಮರ್ಥ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಪ್ರಚಂಡ ಬಹುಮತದ ಗೆಲ್ಲಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ನಗರಸಭಾ ಸದಸ್ಯರಾದ ರಜನಿ ಹೆಬ್ಬಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಪ್ರಧಾನ ಕಾರ್ಯದರ್ಶಿ ರೇಷ್ಮಾ ಶೆಟ್ಟಿ, ವಾರ್ಡಿನ ಚುನಾವಣಾ ಉಸ್ತುವಾರಿ ಸತೀಶ್ ಕುಲಾಲ್, ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತ ಶೆಟ್ಟಿ, ಮೋರ್ಚಾಗಳ ಅಧ್ಯಕ್ಷರಾದ ಅಶ್ವಿನಿ ಶೆಟ್ಟಿ, ಶ್ರೀವತ್ಸ, ಡೆನೀಸ್ ಪೆರಂಪಳ್ಳಿ, ವಾರ್ಡಿನ ಪ್ರಮುಖರಾದ ಮಂಜುನಾಥ ಹೆಬ್ಬಾರ್, ಕಾರ್ಯಕರ್ತರು ಉಪಸ್ಥಿತರಿದ್ದರು.