ವೇಗವಾಗಿ ಬಂದ ಇನ್ನೋವಾ ಕಾರೊಂದು ಲಾರಿಗೆ ಡಿಕ್ಕಿ ಹೊಡೆದು ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಘಟನೆ ಗುಜರಾತ್ನ ಸಬರ್ಕಾಂತ ಜಿಲ್ಲೆಯಲ್ಲಿ ನಡೆದಿದೆ. ಬೆಚ್ಚಿಬೀಳಿಸುವ ಭೀಕರ ಅಪಘಾತದಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬುಧವಾರ ಬೆಳಿಗ್ಗೆ 6 ಗಂಟೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ಟ್ರಕ್ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಸಬರಕಾಂತ್ ಹಿಮ್ಮತ್ ನಗರದ ಸಹಕಾರಿ ಗಿರಣಿ ಬಳಿ ಅಪಘಾತ ನಡೆದಿದೆ. ಕಾರಿನಲ್ಲಿ 8 ಮಂದಿ ಪ್ರಯಾಣಿಕರಿದ್ದರು. ಶಾಮಲಾಜಿಯಿಂದ ಅಹಮದಾಬಾದ್ಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳು ಕಾರಿನಲ್ಲೇ ಸಿಲುಕಿಕೊಂಡಿದ್ದು, ಕೊನೆಗೆ ಅಗ್ನಿಶಾಮಕ ದಳದವರು ಕಟ್ಟರ್ ಬಳಸಿ ಮೃತದೇಹ ಹೊರತೆಗೆದರು.