ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಘಟನೆ; ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್*
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ವ್ಯಕ್ತಿಯೊಬ್ಬರು ಬುಧವಾರ ಮಧ್ಯಾಹ್ನ ವಾರ್ಡ್‌ನ ಗಾಜಿನ ಕಿಟಕಿ ಹಾಗೂ ಕಟ್ಟಡದ ಹೊರಭಾಗದ ರಕ್ಷಣಾ ರಚನೆ (ಫಸಾಡ್) ಸೇರಿದಂತೆ ಸುರಕ್ಷತಾ ವ್ಯವಸ್ಥೆಗಳನ್ನು ಬಲವಂತವಾಗಿ ಮುರಿದು, ಕಟ್ಟಡದ ಹೊರಭಾಗಕ್ಕೆ ತೆರಳಿದರು. ಇದರಿಂದ ರೋಗಿಗಳು ಹಾಗೂ ಸಂದರ್ಶಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ನಂತರ ರೋಗಿಯು ಅಲ್ಲಿಂದ ಕೆಳಗೆ ಜಿಗಿದು ಗಾಯಗೊಂಡರು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ರೋಗಿಯನ್ನು ರಕ್ಷಿಸಿ, ತುರ್ತು ಚಿಕಿತ್ಸೆಗೆ ಸ್ಥಳಾಂತರಿಸಿದರು. ರೋಗಿಯ ಸ್ಥಿತಿ ಸ್ಥಿರವಾಗಿದ್ದು, ಆಸ್ಪತ್ರೆಯ ವೈದ್ಯರ ಆರೈಕೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

