ಮೂಡುಬಿದಿರೆ: ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರಿಗೆ ಪೊಲೀಸ್ ಇಲಾಖೆಯ ದಕ್ಷ ಸೇವೆಗಾಗಿ ನೀಡಲ್ಪಡುವ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.
ರಾಜ್ಯದ ಸುಮಾರು 126 ಮಂದಿ ಪೊಲೀಸ್ ಅಧಿಕಾರಿಗಳು 2023 ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು ಅದರಲ್ಲಿ ಸಂದೇಶ್ ಪಿ.ಜಿ.ಅವರೂ ಇದ್ದಾರೆ.
ದ.ಕ ಹಾಗೂ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ಸಂದೇಶ್ ಅವರು ತಮ್ಮ ಡೇರಿಂಗ್ ಮೂಲಕ ನಿಷ್ಠಾವಂತ ಅಧಿಕಾರಿಯಾಗಿ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ಗಮನಸೆಳೆದಿದ್ದಾರೆ.
ಪ್ರಸ್ತುತ ಅವರು ಮೂಡುಬಿದಿರೆಯಲ್ಲಿ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದು ಅವರಿಗೆ ಸಂದ ಈ ಪ್ರಶಸ್ತಿ ಮೂಡುಬಿದಿರೆಯ ಕೀರ್ತಿಯನ್ನು ಹೆಚ್ಚಿಸಿದೆ.