ಉಪ್ಪೂರು : ಸಾರ್ವಜನಿಕರ ಸುರಕ್ಷತೆ ಹಾಗೂ ಅನುಕೂಲಕ್ಕೆ ಆದ್ಯತೆ ನೀಡಿ, ಸ್ವಂತ ಖರ್ಚಿನಲ್ಲಿ ಬೀದಿ ದೀಪಗಳನ್ನು ಅಳವಡಿಸುವ ಮೂಲಕ ಉಪ್ಪೂರು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಉಪಾಧ್ಯಕ್ಷರಾದ ಸತೀಶ್ ಪೂಜಾರಿ ಅಮ್ಮುಂಜೆ ಅವರು ಮಾದರಿ ಜನಸೇವೆಗೆ ಸಾಕ್ಷಿಯಾಗಿದ್ದಾರೆ.
ಉಪ್ಪೂರು ಗ್ರಾಮ ಪಂಚಾಯಿತಿ ಹಾಗೂ ಮೆಸ್ಕಾಂ ಇಲಾಖೆಯ ಸಹಕಾರದೊಂದಿಗೆ ಉಪ್ಪೂರು ಗ್ರಾಮದ ಚಕ್ಕುಲಿ ಕಟ್ಟೆ ಪ್ರದೇಶದಲ್ಲಿ ಶ್ರೀ ಸುರೇಶ್ ಅವರ ಮನೆಯಿಂದ ಶ್ರೀಮತಿ ಲಕ್ಷ್ಮೀ ಅವರ ಮನೆಯವರೆಗೆ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಈ ಪ್ರದೇಶದಲ್ಲಿ ಹಲವು ವರ್ಷಗಳಿಂದ ಬೀದಿ ದೀಪಗಳ ವ್ಯವಸ್ಥೆ ಇಲ್ಲದ ಕಾರಣ ರಾತ್ರಿ ವೇಳೆ ಸಾರ್ವಜನಿಕರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಇದನ್ನು ಮನಗಂಡ ಸತೀಶ್ ಪೂಜಾರಿ ಅಮ್ಮುಂಜೆ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಬೀದಿ ದೀಪಗಳನ್ನು ಅಳವಡಿಸುವ ಮೂಲಕ ಸ್ಥಳೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಉಪ್ಪೂರು ಗ್ರಾಮ ಪಂಚಾಯಿತಿಯ ಒಂದನೇ ವಾರ್ಡಿನ ಮಾಜಿ ಸದಸ್ಯರಾಗಿಯೂ ಸೇವೆ ಸಲ್ಲಿಸಿರುವ ಅವರು, ತಮ್ಮ ಅಧಿಕಾರಾವಧಿಯಲ್ಲಿ ವಾರ್ಡಿನ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿದ್ದರು. ವಾರ್ಡನ್ನು ಮಾದರಿ ವಾರ್ಡ್ ಆಗಿ ರೂಪಿಸುವ ನಿಟ್ಟಿನಲ್ಲಿ ಹಲವು ಜನಪರ ಕಾರ್ಯಗಳನ್ನು ಕೈಗೊಂಡಿದ್ದರು. ಬಡವರು ಹಾಗೂ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೊತ್ತುಕೊಂಡು ಬಂದಾಗ ಯಾವುದೇ ಫಲಾಪೇಕ್ಷೆಯಿಲ್ಲದೆ ನೆರವಾಗುವ ಮೂಲಕ ಜನರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆ.
ಮುಂದಿನ ದಿನಗಳಲ್ಲಿಯೂ ಉಪ್ಪೂರಿನ ವಂದನೆ ವಾರ್ಡನ್ನು ವಿಶೇಷವಾಗಿ ಅಭಿವೃದ್ಧಿಪಡಿಸುವ ಉದ್ದೇಶವನ್ನು ಅವರು ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಜನರ ಸಮಸ್ಯೆಗಳಿಗೆ ಸ್ಪಂದಿಸುವುದು, ಸಾರ್ವಜನಿಕರ ಸುರಕ್ಷತೆಗಾಗಿ ವೈಯಕ್ತಿಕವಾಗಿ ಶ್ರಮಿಸುವುದು ಹಾಗೂ ಸಮಾಜದ ಹಿತಕ್ಕಾಗಿ ಸೇವೆ ಸಲ್ಲಿಸುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ. ಸತೀಶ್ ಪೂಜಾರಿ ಅಮ್ಮುಂಜೆ ಅವರ ಈ ಜನಪರ ಕಾಳಜಿ ಇತರರಿಗೂ ಮಾದರಿಯಾಗಲಿ ಎಂಬ ಆಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರ ಅನುಕೂಲಕ್ಕಾಗಿ ಕೈಗೊಂಡ ಈ ಕಾರ್ಯಕ್ಕೆ ಸ್ಥಳೀಯರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

