ಗಾಜಿಯಾಬಾದ್: ದೆಹಲಿಯ ಪಕ್ಕದಲ್ಲಿರುವ ಗಾಜಿಯಾಬಾದ್‌ನಲ್ಲಿ ಒಂದು ದುರಂತ ಘಟನೆ ನಡೆದಿದೆ. ಗಾಜಿಯಾಬಾದ್‌ನಲ್ಲಿ ವಾಸಿಸುತ್ತಿದ್ದ ಗುಪ್ತಚರ ಬ್ಯೂರೋ ಅಧಿಕಾರಿ ಮತ್ತು ಅವರ ಸಹೋದರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಒಂದೇ ರೂಂನಲ್ಲಿ ಅವರಿಬ್ಬರ ಶವಗಳು ಪತ್ತೆಯಾಗಿವೆ. ಈ ಪ್ರಕರಣದಲ್ಲಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗದ ಕಾರಣದಿಂದ ಆ ಅಣ್ಣ-ತಂಗಿಯ ಆತ್ಮಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲ. ಆದರೆ ಮಲತಾಯಿ ಇಬ್ಬರೂ ಮಕ್ಕಳನ್ನು ಹಿಂಸಿಸುತ್ತಿದ್ದರು. ಅದಕ್ಕಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಚಿಕ್ಕಮ್ಮ ಆರೋಪಿಸಿದ್ದಾರೆ.
ಈ ಘಟನೆಯು ಗಾಜಿಯಾಬಾದ್ ನಗರದ ಕವಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗೋವಿಂದಪುರಂ ಪ್ರದೇಶದಲ್ಲಿ ನಡೆದಿದೆ. ಗೋವಿಂದಪುರಂ ಹೆಚ್-ಬ್ಲಾಕ್‌ನ ಸುಖ್‌ಬೀರ್ ಸಿಂಗ್ ಅವರ ಮಗ ಅವಿನಾಶ್ ಕುಮಾರ್ ಮತ್ತು ಅವರ ಮಗಳು ಅಂಜಲಿ ಗುರುವಾರ ಸಂಜೆ ವಿಷ ಸೇವಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾದ ನಂತರ ಆ ಕುಟುಂಬವು ಅವರನ್ನು ಕವಿನಗರದ ಸರ್ವೋದಯ ಆಸ್ಪತ್ರೆಗೆ ಕರೆದೊಯ್ದಿತು. ಅಲ್ಲಿ ವೈದ್ಯರು ಅವರಿಬ್ಬರೂ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದರು. ಗುಪ್ತಚರ ಬ್ಯೂರೋ ಅಧಿಕಾರಿ ಮತ್ತು ಅವರ ತಂಗಿಯ ಆತ್ಮಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲ ಎಂದು ಕವಿನಗರದ ಎಸಿಪಿ ಭಾಸ್ಕರ್ ವರ್ಮಾ ಹೇಳಿದ್ದಾರೆ. ಇಡೀ ಪ್ರಕರಣದ ತನಿಖೆ ನಡೆಯುತ್ತಿದೆ.