ದರ್ಭಾಂಗ: ಮಗಳು ಬೇರೆ ಜಾತಿಯವನನ್ನು ಮದುವೆಯಾಗಿದ್ದಾಳೆ ಎನ್ನುವ ಕೋಪದಲ್ಲಿ ಮಾವ ಅಳಿಯನಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಬಿಹಾರದ ದರ್ಭಾಂಗದಲ್ಲಿ ನಡೆದಿದೆ. ನನ್ನ ಕಣ್ಣ ಮುಂದೆಯೇ ನನ್ನ ತಂದೆ ನನ್ನ ಗಂಡನನ್ನು ಕೊಲೆ ಮಾಡಿದ್ದಾರೆ ಎಂದು ಮಹಿಳೆಯೊಬ್ಬಳು ಆರೋಪಿಸಿದ್ದಾರೆ. ತಾನು ಬೇರೆ ಜಾತಿಯ ಹುಡುಗನನ್ನು ಮದುವೆಯಾಗಿದ್ದಕ್ಕೆ ಕೋಪದಿಂದ ಆತನನ್ನು ಹತ್ಯೆ ಮಾಡಿದ್ದಾರೆಂದು ಮಹಿಳೆ ಹೇಳಿದ್ದಾರೆ.
ಈ ಘಟನೆ ಬಿಹಾರದ ದರ್ಭಾಂಗದಲ್ಲಿ ನಡೆದಿದೆ. 25 ವರ್ಷದ ನಸಿಂಗ್ ವಿದ್ಯಾರ್ಥಿಯನ್ನು ವ್ಯಕ್ತಿಯೊಬ್ಬರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆ ವಿದ್ಯಾರ್ಥಿ ಇತ್ತೀಚೆಗಷ್ಟೇ ಆರೋಪಿಯ ಮಗಳನ್ನು ಮದುವೆಯಾಗಿದ್ದ ಎಂಬುದು ತಿಳಿದುಬಂದಿದೆ.
ದರ್ಭಾಂಗಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬಿಎಸ್ಸಿ (ನರ್ಸಿಂಗ್) ಎರಡನೇ ವರ್ಷದ ವಿದ್ಯಾರ್ಥಿ ರಾಹುಲ್ ಕುಮಾರ್ ಅವರನ್ನು ಅವರ ಪತ್ನಿ ತನ್ನು ಪ್ರಿಯಾ ಮುಂದೆಯೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ರಾಹುಲ್ ಜೊತೆ ಅಂತರ್ಜಾತಿ ವಿವಾಹವಾದ ನಂತರ ತನ್ನು ಅವರ ಕುಟುಂಬ ಅಸಮಾಧಾನಗೊಂಡಿತ್ತು ಎಂದು ತಿಳಿದುಬಂದಿದೆ. ಕೊಲೆಯ ನಂತರ ರಾಹುಲ್‌ನ ಸಹ ವಿದ್ಯಾರ್ಥಿಗಳು ತನ್ನುವಿನ ತಂದೆ ಪ್ರೇಮ್‌ಶಂಕರ್ ಝಾ ಅವರನ್ನು ಥಳಿಸಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉನ್ನತ ಚಿಕಿತ್ಸೆಗಾಗಿ ಅವರನ್ನು ಪಾಟ್ನಾಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಹುಲ್ ಮತ್ತು ತನ್ನು ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದರು ಮತ್ತು ಒಂದೇ ಹಾಸ್ಟೆಲ್ ಕಟ್ಟಡದಲ್ಲಿ ಬೇರೆ ಬೇರೆ ಮಹಡಿಗಳಲ್ಲಿ ವಾಸಿಸುತ್ತಿದ್ದರು. ನಿನ್ನೆ ಸಂಜೆ ರಾಹುಲ್ ಬಳಿಗೆ ಹೂಡಿ ಧರಿಸಿದ ವ್ಯಕ್ತಿಯೊಬ್ಬರು ಬರುವುದನ್ನು ನೋಡಿದೆ ಮತ್ತು ನಂತರ ಅದು ತನ್ನ ತಂದೆ ಎಂದು ತಿಳಿಯಿತು, ಅವರ ಬಳಿ ಬಂದೂಕು ಇತ್ತು. ಅವರು ನನ್ನ ಕಣ್ಣೆದುರೇ ನನ್ನ ಗಂಡನ ಎದೆಗೆ ಗುಂಡು ಹಾರಿಸಿದರು. ಅವರು ನನ್ನ ಮಡಿಲಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ಮಹಿಳೆ ಕಣ್ಣೀರಿಟ್ಟಿದ್ದಾರೆ.
ಇದರ ಬಗ್ಗೆ ಮೊದಲೇ ಅನುಮಾನವಿತ್ತು, ಹೀಗಾಗಿ ನ್ಯಾಯಾಲಯದ ಮೊರೆ ಹೋಗಿ ತನ್ನ ತಂದೆ ಹಾಗೂ ಸಹೋದರ ನಮಗೆ ಹಾನಿ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದೆವು ಎಂದು ತನ್ನು ಹೇಳಿದ್ದಾರೆ.
ಗುಂಡಿನ ದಾಳಿಯ ನಂತರ, ರಾಹುಲ್ ಸ್ನೇಹಿತರು ಮತ್ತು ಇತರ ಹಾಸ್ಟೆಲ್ ಬೋರ್ಡಿಂಗ್ ಸಿಬ್ಬಂದಿ ಝಾ ಅವರನ್ನು ಥಳಿಸಿದ್ದಾರೆ. ರಾಹುಲ್‌ಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ಪೊಲೀಸರು ವಿದ್ಯಾರ್ಥಿಗಳನ್ನು ಆಸ್ಪತ್ರೆಯಿಂದ ಹೊರಗೆ ಓಡಿಸುತ್ತಿರುವುದು ಕೆಲವು ವಿಡಿಯೋದಲ್ಲಿ ಕಂಡುಬಂದಿದೆ.
ದರ್ಭಾಂಗಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ಕುಮಾರ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜಗನ್ನಾಥ್ ರೆಡ್ಡಿ ಆಸ್ಪತ್ರೆಗೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಪೊಲೀಸರ ದೊಡ್ಡ ಗುಂಪು ಸ್ಥಳದಲ್ಲಿತ್ತು.