ಉದ್ಯೋಗದಾತ, ಸಮಾಜಸೇವಕ ಕೋತ್ವಾಲ್ ಪದ್ಮನಾಭ ಶೇರುಗಾರ್‌ಗೆ ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ – ಉದ್ಯೋಗ ರತ್ನ’ ಅಚೀವ್‌ಮೆಂಟ್ ಅವಾರ್ಡ್ 2026

0
14

ವರ್ಷಿಣಿ ಎಂಟರ್ಪ್ರೈಸಸ್ ಮೂಲಕ ನೂರಾರು ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿ, ಸಮಾಜಸೇವಕ, ಧಾರ್ಮಿಕ ಸೇವಾಕರ್ತ ಹಾಗೂ ಕೊಡುಗೈ ದಾನಿಯಾಗಿ ಗುರುತಿಸಿಕೊಂಡಿರುವ ಉದ್ಯೋಗದಾತ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರಿಗೆ ಪ್ರತಿಷ್ಠಿತ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ – ಉದ್ಯೋಗ ರತ್ನ” Achievement Award 2026 ಪ್ರದಾನಕ್ಕೆ ಆಯ್ಕೆ ಮಾಡಲಾಗಿದೆ.

ಗಡಿನಾಡು ಕಾಸರಗೋಡಿನ ಖ್ಯಾತ ಕನ್ನಡ ಸಂಸ್ಥೆಯಾದ ಕನ್ನಡ ಭವನ, ಡಾ. ಕೆ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಅವರ ಸಾರಥ್ಯದಲ್ಲಿ ನೀಡಲಾಗುವ ಈ ಪ್ರಶಸ್ತಿಗೆ ಶೇರುಗಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಹಲವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಸಂಘ-ಸಂಸ್ಥೆಗಳಲ್ಲಿ ಪದಾಧಿಕಾರಿ, ನಿರ್ದೇಶಕ ಹಾಗೂ ಪೋಷಕರಾಗಿ ಸೇವೆ ಸಲ್ಲಿಸುತ್ತಿರುವ ಅವರು, ಪ್ರಸ್ತುತ ವಿಶ್ವ ರಾಮ ಕ್ಷತ್ರಿಯ ಮಹಾಸಂಘ (ರಿ.), ಕುಂದಾಪುರ ಇದರ ಕಾರ್ಯದರ್ಶಿಯಾಗಿಯೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.