ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

0
7

ಉಜಿರೆ : ಧಾರವಾಡ ಜಿಲ್ಲೆಯ ನವಲೂರಿನಲ್ಲಿ ಶ್ರೀ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ನಡೆದಂತಹ ಅಂತರ್ ರಾಜ್ಯ ಮಟ್ಟದ ಆಹ್ವಾನಿತ ತಂಡಗಳ ಮಹಿಳೆಯರ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ತಂಡವು ಪ್ರಥಮ ಸ್ಥಾನ ಪಡೆಯುವ ಮೂಲಕ ಪಂದ್ಯಾಟದ ಚಾಂಪಿಯನ್ ಗಳಾಗಿದ್ದಾರೆ.

ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿನಿ ಪ್ರಿಯಾಂಕ ಉತ್ತಮ ಅಟ್ಯಾಕರ್ , ವಿದ್ಯಾರ್ಥಿನಿ ಐಶ್ವರ್ಯ  ಬೆಸ್ಟ್ ಲಿಬ್ರೋ ವೈಯಕ್ತಿಕ ಪ್ರಶಸ್ತಿಗಳನ್ನು ಪಡೆದುಕೊಂಡರು. ತಂಡದಲ್ಲಿ ವಿದ್ಯಾರ್ಥಿಗಳಾದ ರಕ್ಷಿತಾ, ಶ್ರಿಯಾ,  ಸಂಗೀತ , ಜಸ್ಲಿನ್, ಇಂಚರ, ಸಾಕ್ಷಿ, ಸ್ಮಿತಾ, ಲಾಸ್ಯ, ಅಪೂರ್ವ, ತನು ಮತ್ತು ಅಂಜಲಿ ಪಾಲ್ಗೊಂಡಿದ್ದರು. ತಂಡಕ್ಕೆ ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್ ತರಬೇತಿಯನ್ನು ನೀಡಿದ್ದಾರೆ.

ವಿಜೇತ ತಂಡಕ್ಕೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಕಾಲೇಜಿನ ಪ್ರಾಚಾರ್ಯ ಪ್ರೊ. ವಿಶ್ವನಾಥ್ ಪಿ, ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ದೈಹಿಕ ಶಿಕ್ಷಣ ಉಪನ್ಯಾಸಕ ಮತ್ತು ವಾಲಿಬಾಲ್ ತರಬೇತುದಾರ ಸುದೀನ್ ಪೂಜಾರಿ, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here