ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ಜನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ಬಗ್ಗೆ ಆಸಕ್ತಿ ಬೆಳೆಸಬೇಕು: ಉಷಾ ವಿಶ್ವನಾಥ ಭಟ್ ಕಿಲ್ಪಾಡಿ

0
17

ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ಜನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ಬಗ್ಗೆ ಆಸಕ್ತಿ ಬೆಳೆಸಬೇಕು. ಶಾಲೆಗಳು ಶಿಕ್ಷಣದ ಜೊತೆಗೆ ನಮ್ಮ ನಾಡಿನ ಪರಂಪರೆ ಮತ್ತು ಜೀವನ ಮೌಲ್ಯಗಳನ್ನು ಪರಿಚಯಿಸುವ ಕೇಂದ್ರಗಳಾಗಬೇಕು. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ನಮ್ಮ ಸಂಸ್ಕೃತಿಯ ಬಗ್ಗೆ ಅಭಿಮಾನ ಮತ್ತು ಗೌರವವನ್ನು ಮೂಡಿಸಲು ಸಹಕಾರಿಯಾಗುತ್ತವೆ ಎಂದು ಎಸ್. ಕೋಡಿಯ ಜ್ಯೋತಿಷ್ಯರಾದ ಉಷಾ ವಿಶ್ವನಾಥ ಭಟ್ ಕಿಲ್ಪಾಡಿ ತಿಳಿಸಿದರು
.
ಇವರು ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ, ಕರ್ನಾಟಕ ಜನಪದ ಪರಿಷತ್ತು ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಘಟಕ , ಮೂಡುಬಿದಿರೆ ತಾಲೂಕು ಘಟಕ ಹಾಗೂ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ಶಿಮಂತೂರು ಇವರ ಸಹಯೋಗದಲ್ಲಿ ಆಯೋಜಿಸಲಾದ ಜಾನಪದ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನಪದ ಪರಿಷತ್ ಮೂಡಬಿದ್ರೆ ಘಟಕದ ಅಧ್ಯಕ್ಷರಾದಪದಶ್ರೀ ಭಟ್ ನಿಡ್ಡೋಡಿ ವಹಿಸಿ ಜನಪದ ಪರಂಪರೆಯನ್ನು ಕೇವಲ ನೆನಪಿಸಿಕೊಳ್ಳುವುದಲ್ಲದೆ, ಅದನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಜ್ಯೋತಿಷ್ಯರಾದ ವಿದ್ವಾನ್ ವಿಶ್ವನಾಥ ಭಟ್ ಕಿಲ್ಪಾಡಿ, ಶ್ರೀ ಶಾರದಾ ಸೊಸೈಟಿಯ ಕೋಶಾಧಿಕಾರಿ ಕೆ. ಭುವನಾಭಿರಾಮ ಉಡುಪ, ಪೊಂಪೈ ಕಾಲೇಜು ಐಕಳದ ಪ್ರಾಚಾರ್ಯ ಡಾ. ಪುರುಷೋತ್ತಮ ಕೆ.ವಿ. ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ನ ಸಂಚಾಲಕ ದೇವಪ್ರಸಾದ್ ಪುನರೂರು ಮತ್ತು ಪ್ರಾಚಾರ್ಯ ಜಿತೇಂದ್ರ ವಿ ರಾವ್ , ಶಿಕ್ಷಕರಕ್ಷಕ ಸಂಘ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನ ಅಧ್ಯಕ್ಷೆ ಹೇಮಲತಾ ದೇವಾಡಿಗ , ಜಾನಪದ ಪರಿಷತ್ತಿನ ಮೂಡುಬಿದಿರೆ ತಾಲೂಕು ಘಟಕದ ಸದಸ್ಯರಾದ ದೀನ್ ರಾಜ್ ಉಪಸ್ಥಿತರಿದ್ದರು.

ಕರ್ನಾಟಕ ಜಾನಪದ ಸಂಚಾಲಕರಾದ ಚೇತನಾ ರಾಜೇಂದ್ರ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು, ಮಂದಾರ ಪ್ರತಿಷ್ಠಾನದ ಅಧ್ಯಕ್ಷರಾದ ಮಂದಾರ ರಾಜೇಶ್ ಭಟ್ ವಂದಿಸಿದರು ವಿಧ್ಯಾರ್ಥಿಗಳಿಗೆ. ಜಾನಪದ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು