ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಾಣಿಕೆ ವಿರೋಧಿ ದಿನ – 2026 ಆಚರಿಸಲಾಯಿತು.

ಹೆಬ್ರಿ ಆರಕ್ಷಕ ಠಾಣೆಯ ಪಿ ಎಸ್ ಐ ಚಂದ್ರ ಕೆ, ಮಾತನಾಡಿ, ಮಾದಕ ವಸ್ತುಗಳ ದುಷ್ಪರಿಣಾಮ, ಕಾನೂನು ಅರಿವು, ವಿದ್ಯಾರ್ಥಿಗಳ ಜವಾಬ್ದಾರಿಯ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಮೃತ ಭಾರತಿ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ, ಹೆಬ್ರಿ ಆರಕ್ಷಕ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜ್ ಕುಮಾರ್ , ಸಂಸ್ಥೆಯ ಮುಖ್ಯಶಿಕ್ಷಕಿ ಅಪರ್ಣಾ ಆಚಾರ್, ಶಕುಂತಲಾ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಂಸ್ಥೆಯ ವಿಜ್ಞಾನ ಶಿಕ್ಷಕಿರಾದ ಸೌಪರ್ಣಿಕಾ ಜೋಷಿ ಸ್ವಾಗತಿಸಿ, ನವ್ಯಾ ಪೈ ವಂದಿಸಿದರು.

