ಅಂತರಾಷ್ಟ್ರೀಯ ಹಿಂದೂ ಮಹಾಸಭಾದಿಂದ ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ “ಕಲಾಚೇತನ ” ಅಂತರಾಷ್ಟ್ರೀಯ ಪ್ರಶಸ್ತಿ ಪ್ರಧಾನ

0
58

ದಾವಣಗೆರೆ : ಹುಬ್ಬಳ್ಳಿಯ ಅಂತರಾಷ್ಟ್ರೀಯ ಹಿಂದೂ ಮಹಾಸಭಾದಿಂದ ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ “ಕಲಾಚೇತನ ” ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗಿದೆ ಎಂದು ಅಂತರಾಷ್ಟ್ರೀಯ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಹಲಕರಸಿಂಗ್ ತಿಳಿಸಿದ್ದಾರೆ.

ಡಾ. ಬಿ.ಆರ್.ಅಂಬೇಡ್ಕರ್‌ರವರ 135ನೇ ಜಯಂತಿ ಪರವಾಗಿ “ದಾವಣಗೆರೆಯ ಸಾಂಸ್ಕೃತಿಕ ರಾಯಭಾರಿ” ಎಂದೇ ಖ್ಯಾತರಾದ ಕನ್ನಡ ನಾಡು-ನುಡಿ, ನೆಲ-ಜಲ, ಸಂಸ್ಕತಿ, ಯಕ್ಷಗಾನ ಕ್ಷೇತ್ರಗಳಲ್ಲಿ ಅನವರತವಾಗಿ ನಾಲ್ಕು ದಶಕಗಳಿಂದ ನಿರಂತರವಾಗಿ ಕಠಿಣ ಪರಿಶ್ರಮದಿಂದ ಶ್ರಮಿಸುತ್ತಿರುವ ಸೇವೆ ಗಣನೀಯ. ವಾಣಿಜ್ಯ ನಗರಿಯನ್ನು ಸಾಂಸ್ಕೃತಿಕ ನಗರಿಯಾಗಿ ಪರಿವರ್ತನೆ ಮಾಡಿದ ಶೆಣೈಯವರಿಗೆ ಈ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು ಮೆಚ್ಚುಗೆ ಎಂದು ಅಂತರಾಷ್ಟ್ರೀಯ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷರಾದ ಸೋಮಶೇಖರ ಪಿ.ಯಾದವ್ ಪ್ರಕಟಿಸಿದ್ದಾರೆ.

ದಾವಣಗೆರೆಯ ಕಲಾಕುಂಚ, ಯಕ್ಷರಂಗ, ಸಿನಿಮಾಸಿರಿ, ಕರ್ನಾಟಕ ಸಗಮ ಸಂಗೀತ ಪರಿಷತ್, ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ, ಬಿಚ್ಕತ್ತಿ ಕುಟುಂಬ, ಸಿನಿಮಾಸಿರಿ, ಕಲಾಸಿರಿ ಸಂಸ್ಥೆ, ಕರ್ನಾಟಕ ಸಗಮ ಸಂಗೀತ ಪರಿಷತ್, ಕನ್ನಡ ಸಾಹಿತ್ಯ ಪರಿಷತ್, ಕರಾವಳಿ ಮಿತ್ರ ಮಂಡಳಿ ಮುಂತಾದ ಅನೇಕ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here