ಎಸ್‌ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

0
7

ಮಂಗಳೂರು : ಎಸ್‌ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನ ಭಾಷಾ ವಿಭಾಗಗಳ ವತಿಯಿಂದ ಸೆಪ್ಟೆಂಬರ್ 8, 2026ರಂದು ಬೆಳಿಗ್ಗೆ 11:30ಕ್ಕೆ ಉಪನ್ಯಾಸ ಕೂಠಡಿ –03ರಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ನಡೆಯಿತು.

ಸಾಕ್ಷರತೆ, ಭಾಷೆ, ಸಂಸ್ಕೃತಿ, ಮಾನವೀಯತೆ ಹಾಗೂ ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳನ್ನು ಪ್ರೇರೇಪಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಕಾರ್ಯಕ್ರಮವು ಸಂಸ್ಥೆಯ ಗೀತೆಯೊಂದಿಗೆ ಆರಂಭಗೊಂಡಿತು. ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಧುಮತಿ ಜೆ. ರಾಜಾ ಪ್ರಸ್ತಾವಿಕ ಭಾಷಣದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನದ ಮಹತ್ವವನ್ನು ವಿವರಿಸುತ್ತಾ, ಸಾಕ್ಷರತೆ ಎಂಬುದು ಕೇವಲ ಓದು-ಬರಹದ ಜ್ಞಾನಕ್ಕೆ ಸೀಮಿತವಾಗಿರದೆ, ವ್ಯಕ್ತಿಯ ಜ್ಞಾನ, ಚಿಂತನೆ, ಮಾನವೀಯತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಪ್ರಮುಖ ಸಾಧನವಾಗಿದೆ ಎಂದು ತಿಳಿಸಿದರು. ಭಾಷೆ ಮತ್ತು ಸಂಸ್ಕೃತಿಯು ವ್ಯಕ್ತಿಯ ಅಸ್ತಿತ್ವ ಹಾಗೂ ಸಮಾಜದೊಂದಿಗೆ ಹೊಂದಿರುವ ಸಂಬಂಧವನ್ನು ಗಟ್ಟಿಗೊಳಿಸುತ್ತವೆ ಎಂದು ಅವರು ಹೇಳಿದರು ಮಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸುಚಿತ್ರಾ ಪಿ. ಶೆಟ್ಟಿ ಮಾತನಾಡಿ, ಸಾಕ್ಷರತೆ ಎಂಬುದು ಕೇವಲ ಅಕ್ಷರಜ್ಞಾನವಲ್ಲ; ಅದು ವ್ಯಕ್ತಿಯ ಚಿಂತನೆ, ಅರಿವು ಮತ್ತು ಸಾಮಾಜಿಕ ಪ್ರಜ್ಞೆಯನ್ನು ವಿಸ್ತರಿಸುವ ಶಕ್ತಿಯಾಗಿದೆ ಎಂದು ಹೇಳಿದರು. ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆ ಹಾಗೂ ಬೆಳವಣಿಗೆಯಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ತಮ್ಮ ಮಾತೃಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಹೆಮ್ಮೆ ಬೆಳೆಸಿಕೊಂಡು, ಶಿಕ್ಷಣದಿಂದ ಪಡೆದ ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸಬೇಕು ಎಂದು ಅವರು ಕರೆ ನೀಡಿದರು. ಹಾಗೂ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ವಂದನಾ ಮಾತನಾಡಿ ಸಾಕ್ಷರತೆಯು ವ್ಯಕ್ತಿಯ ಜ್ಞಾನ ಮತ್ತು ಆತ್ಮವಿಶ್ವಾಸವನ್ನು ವೃದ್ಧಿಸುವುದರ ಜೊತೆಗೆ, ಸಮಾಜದಲ್ಲಿ ಜಾಗೃತಿ ಹಾಗೂ ಸಮಾನತೆಯನ್ನು ಬೆಳೆಸುವ ಪ್ರಮುಖ ಸಾಧನವಾಗಿದೆ ಎಂದು ಹೇಳಿದರು. ಭಾಷೆಗಳು ವಿಭಿನ್ನವಾಗಿದ್ದರೂ ಅವುಗಳ ಉದ್ದೇಶ ಮಾನವರನ್ನು ಪರಸ್ಪರ ಸಂಪರ್ಕಿಸುವುದಾಗಿದೆ.

ವಿದ್ಯಾರ್ಥಿಗಳು ವಿವಿಧ ಭಾಷೆಗಳನ್ನು ಗೌರವಿಸುವುದರೊಂದಿಗೆ ತಮ್ಮ ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸಬೇಕು ಎಂದು ಅವರು ತಿಳಿಸಿದರು . ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಹಾರ್ದಿಕ್ ಪಿ. ಚೌಹಾಣ್ ಅಧ್ಯಕ್ಷೀಯ ಭಾಷಣದಲ್ಲಿ . ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕಷ್ಟೇ ಸೀಮಿತವಾಗದೆ, ವ್ಯಕ್ತಿತ್ವ ವಿಕಸನ ಮತ್ತು ಸಮಾಜದ ಒಳಿತಿಗೆ ದಾರಿಯಾಗಬೇಕು ಎಂದು ಅವರು ತಿಳಿಸಿದರು. ಸಾಕ್ಷರತೆಯ ಮೂಲಕ ಜ್ಞಾನವನ್ನು ಸಂಪಾದಿಸಿ, ಆ ಜ್ಞಾನವನ್ನು ಸಮಾಜದ ಇತರರ ಜೀವನವನ್ನು ಉತ್ತಮಗೊಳಿಸಲು ಬಳಸುವ ಜವಾಬ್ದಾರಿ ಪ್ರತಿಯೊಬ್ಬ ವಿದ್ಯಾರ್ಥಿಯ ಮೇಲಿದೆ ಎಂದು ಅವರು ಕರೆ ನೀಡಿದರು.

ಸಾಕ್ಷರತೆ, ಭಾಷೆ, ಮಾನವೀಯತೆ ಮತ್ತು ಸಮೃದ್ಧಿಯ ನಡುವಿನ ಸಂಬಂಧವನ್ನು ವಿವರಿಸಿದ ಭಾಷಣಕಾರರು, ಭಾಷೆ ಮತ್ತು ಸಂಸ್ಕೃತಿ ಸಮಾಜವನ್ನು ಬೆಸೆಯುವ ಪ್ರಮುಖ ಸಾಧನಗಳಾಗಿವೆ ಎಂದು ತಿಳಿಸಿದರು. ಪದವಿ ಶಿಕ್ಷಣ ಪೂರ್ಣಗೊಳಿಸಿದ ಬಳಿಕ ತಮ್ಮ ಜ್ಞಾನ ಮತ್ತು ಶಿಕ್ಷಣವನ್ನು ಇತರರ ಜೀವನವನ್ನು ಉತ್ತಮಗೊಳಿಸಲು ಬಳಸುವ ಮೂಲಕ ಸಮಾಜಕ್ಕೆ ಸಕಾರಾತ್ಮಕ ಕೊಡುಗೆ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ದ್ವಿತೀಯ ಬಿ ಬಿ ಎ ವಿದ್ಯಾರ್ಥಿನಿ ಹವ್ವಾ ಶಬ್ನೂರ್ ಸ್ವಾಗತ ಭಾಷಣ ನೆರವೇರಿಸಿದರು.

ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಬಿಂದು ಕುಲಾಲ್ ಕಾರ್ಯಕ್ರಮವನ್ನು ಸಮರ್ಥವಾಗಿ ನಿರೂಪಿಸಿದರು. ದ್ವಿತೀಯ ಬಿ ಸಿ.ಎ ವಿದ್ಯಾರ್ಥಿನಿ ಸಮಾರೋಪಗೊಂಡಿತು.