“ಅಂತರರಾಷ್ಟ್ರೀಯ ತಾಂತ್ರಿಕ ಸಮ್ಮೇಳನ” : ಶ್ರೀನಿವಾಸ್‌ ಯೂನಿವರ್ಸಿಟಿ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ಮುಕ್ಕ, ಮಂಗಳೂರು

0
36

ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸಂಸ್ಥೆಯಲ್ಲಿ ಎಪ್ರಿಲ್ 29 ಮತ್ತು 30 ರಂದು ಇನ್ಸಿಟ್ಯೂಟ್ ಆಫ್ ಎಲೆಕ್ನಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನೀಯರ್ಸ್ (IEEE) ಬೆಂಗಳೂರು ಮತ್ತು ಮಂಗಳೂರು ವಿಭಾಗಗಳ ಸಹಭಾಗಿತ್ವದಲ್ಲಿ ‘ಹೊಸತಾಗಿ ಬೆಳೆಯುತ್ತಿರುವ ಸಮನ್ವಯ ವಿಜ್ಞಾನ ಮತ್ತು ತಂತ್ರಜ್ಞಾನ’ ಗಳ ಕುರಿತು ಅಂತರರಾಷ್ಟ್ರೀಯ ಸಮ್ಮೇಳನವನ್ನು (ICESST 2026) ಆಯೋಜಿಸಲಿದ್ದೇವೆ. ಕಳೆದ ಹಲವಾರು ವರ್ಷಗಳಲ್ಲಿ, ಶ್ರೀನಿವಾಸ್ ವಿಶ್ವವಿದ್ಯಾಲಯ ಹಾಗೂ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸಂಸ್ಥೆಯಲ್ಲಿ ಹಲವಾರು ಅಂತರರಾಷ್ಟ್ರೀಯ ತಾಂತ್ರಿಕ ಸಮ್ಮೇಳನವನ್ನು ಆಯೋಜಿಸಿದ್ದೇವೆ. ಆದರೆ, IEEE ಸಹಭಾಗಿತ್ವದಲ್ಲಿ ಇದೇ ಮೊದಲ ಬಾರಿಗೆ ಅಂತರರಾಷ್ಟ್ರೀಯ ತಾಂತ್ರಿಕ ಸಮ್ಮೇಳನವನ್ನು ಆಯೋಜಿಸುತ್ತಿದ್ದೇವೆ. ಈ ಪ್ರತಿಷ್ಠಿತ ಅಂತರರಾಷ್ಟ್ರೀಯ ಸಮ್ಮೇಳನವು ಸಂಶೋಧಕರಿಗೆ, ಶೈಕ್ಷಣಿಕ ವಲಯದ ಸಾಧಕರಿಗೆ, ಉದ್ಯಮ ಕ್ಷೇತ್ರದ ಪರಿಣಿತರಿಗೆ ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ಮೂಲ ಸಂಶೋಧನಾ ಪ್ರಬಂಧಗಳನ್ನು ಪ್ರಸ್ತುತಪಡಿಸಲು ಮತ್ತು ಶಕ್ತಿ, ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರಗಳಲ್ಲಿನ ಇತ್ತೀಚಿನ ನವೀನತೆಗಳನ್ನು ಚರ್ಚಿಸಲು ಜಾಗತಿಕ ವೇದಿಕೆಯನ್ನು ಒದಗಿಸಲಿದೆ.

ಈ ಪ್ರತಿಷ್ಠಿತ ಅಂತರರಾಷ್ಟ್ರೀಯ ಸಮ್ಮೇಳನದ ಸಿದ್ಧತೆಯು ಕಳೆದ ವರ್ಷ ಡಿಸೆಂಬರ್ ನಲ್ಲಿ ಪ್ರಾರಂಭವಾಯಿತು. ಕಂಪ್ಯೂಟರ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ರೋಬೋಟಿಕ್ಸ್ ಹಾಗೂ ಮೂಲಭೂತ ವಿಜ್ಞಾನ ಸೇರಿದಂತೆ ಬಹುಶಾಖೀಯ ವಿಷಯವಲಯಗಳಿಗೆ ಸಂಬಂಧಿಸಿದ 509 ಸಂಶೋಧನಾ ಪ್ರಬಂಧಗಳಲ್ಲಿ ಆಯ್ಕೆ ಮಾಡಲಾದ 152 ಪ್ರಬಂಧಗಳನ್ನು ದೇಶದ ವಿವಿಧ ಭಾಗಗಳಿಂದ ಹಾಗೂ ವಿದೇಶಗಳಿಂದ ಆಗಮಿಸಲಿರುವ ಉಪನ್ಯಾಸಕರು, ಸಂಶೋಧಕರು, ತಜ್ಞರು ಹಾಗೂ ವಿದ್ಯಾರ್ಥಿಗಳು ಪ್ರಸ್ತುತಪಡಿಸಲಿದ್ದಾರೆ. ಇದರ ಜೊತೆಗೆ, ದಿಕ್ಕೂಚಿ ಭಾಷಣ, ತಜ್ಞರ ಹಾಗೂ ಪರಿಣಿತರ ಚರ್ಚೆಗಳು ಮತ್ತು ಪ್ರಾಜೆಕ್ಟ್ ಪ್ರದರ್ಶನಗಳು ನಡೆಯಲಿವೆ.

ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ್ ರಾವ್, ಶ್ರೀನಿವಾಸ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರುಗಳಾದ . ಎ. ವಿಜಯಲಕ್ಷ್ಮಿ ಆರ್. ರಾವ್ ಹಾಗೂ ಪ್ರೊ. ಎ. ಮಿತ್ರ ಎಸ್ ರಾವ್ ರವರು ಈ ಅಂತರರಾಷ್ಟ್ರೀಯ ಸಮ್ಮೇಳನದ ಪೋಷಕರಾಗಿದ್ದಾರೆ.

ಜರ್ಮನಿ ದೇಶದ ಲೈಬ್ರಿಜ್ ಇನ್ಸಿಟ್ಯೂಟ್ ಫಾರ್ ಆಸ್ಟೋಫಿಸಿಕ್ಸ್ ಸಂಸ್ಥೆಯ ವಿಜ್ಞಾನಿ ಡಾ. ಸಿಡ್ನಿ ಎ. ಬಾರ್ನ್ಸ್, ಸ್ಕಾಟ್ಲಂಡ್ ದೇಶದ ರಾಬರ್ಟ್ ಗೋರ್ಡಾನ್ ಯೂನಿವರ್ಸಿಟಿಯ ವಿಜ್ಞಾನಿ ಡಾ. ರಾಧಾಕೃಷ್ಣ ಪ್ರಭು, ಐಬಿಎಂ ಬೆಂಗಳೂರಿನ ಹಿರಿಯ ಡೆಲಿವರಿ ಮ್ಯಾನೇಜರ್ ಶ್ರೀ ರಾಜಾ ಕೃಷ್ಣಮೂರ್ತಿ, ಎನ್‌ಐಟಿಕೆ ಸುರತ್ಕಲ್ ‌ ಪ್ರೊಫೆಸರ್ ಡಾ. ಜಿ. ಎನ್. ಕುಮಾರ್, ಐಇಇಇ ಮಂಗಳೂರು ಉಪವಿಭಾಗದ ಮಾಜಿ ಅಧ್ಯಕ್ಷರಾದ ಪ್ರೊ. ಡಾ. ಸತ್ಯನಾರಾಯಣ, ಐಇಇಇ ಮಂಗಳೂರು ಉಪವಿಭಾಗದ ನಿಕಟಪೂರ್ವ ಅಧ್ಯಕ್ಷರಾದ ಡಾ. ವಾಸುದೇವ್, ಐಇಇಇ ಮಂಗಳೂರು ಉಪವಿಭಾಗದ ಅಧ್ಯಕ್ಷರಾದ ಡಾ. ವೇಣುಗೋಪಾಲ ಪಿ. ಎಸ್. ರವರು ಈ ಅಂತರರಾಷ್ಟ್ರೀಯ ಸಮ್ಮೇಳನದ ಮಾರ್ಗದರ್ಶಕ ಸಮಿತಿಯ ಸದಸ್ಯರಾಗಿದ್ದಾರೆ.

ಶ್ರೀನಿವಾಸ್‌ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಕೆ. ಸತ್ಯನಾರಾಯಣ ರೆಡ್ಡಿ, ಕುಲಸಚಿವರಾದ ಡಾ. ಅನಿಲ್ ಕುಮಾರ್, ಮೌಲ್ಯಮಾಪನ ವಿಭಾಗದ ಕುಲಸಚಿವರಾದ ಡಾ. ಶ್ರೀನಿವಾಸ ಮಯ್ಯ ಡಿ., ಅಭಿವೃದ್ಧಿ ವಿಭಾಗದ ಕುಲಸಚಿವರಾದ ಡಾ. ಅಜಯ್ ಕುಮಾರ್, ಶೈಕ್ಷಣಿಕ ವಿಭಾಗದ ಕುಲಸಚಿವರಾದ ಡಾ. ಆದಿತ್ಯ ಕುಮಾರ್ ಮಯ್ಯ ರವರು ಈ ಸಮ್ಮೇಳನದ ಸಲಹಾ ಸಮಿತಿಯ ಸದಸ್ಯರಾಗಿದ್ದಾರೆ.

ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಎನ್ ಹೆಗಡೆ ಯವರು, ಎರಡು ದಿನಗಳ ಕಾಲ ಮುಕ್ಕದಲ್ಲಿ ನಡೆಯಲಿರುವ ಈ ಅಂತರರಾಷ್ಟ್ರೀಯ ಸಮ್ಮೇಳನದ ಪ್ರಧಾನ ಉಸ್ತುವಾರಿಯನ್ನು ವಹಿಸಲಿದ್ದಾರೆ. ಅಂತರರಾಷ್ಟ್ರೀಯ ಸಮ್ಮೇಳನದ ಸಂಚಾಲಕರು ಹಾಗೂ ಕಾಲೇಜಿನ ಸೈಬ‌ರ್ ಸೆಕ್ಯೂರಿಟಿ ವಿಭಾಗದ ಮುಖ್ಯಸ್ಥರಾದ ಪ್ರೊ. ಗೌರವ್ ಪ್ರಸಾದ್ ರವರು ಸಹಕರಿಸಲಿದ್ದಾರೆ.

ಭಾರತದ ಖ್ಯಾತ ಅಂತರಿಕ್ಷ ವಿಜ್ಞಾನಿ, ದೇಶದ ಅತ್ಯುನ್ನತ ಅಂತರಿಕ್ಷ ಸಂಸ್ಥೆ “ಇಸ್ರೋ” ಮಾಜಿ ಅಧ್ಯಕ್ಷರು ಹಾಗೂ “ಪದ್ಮಶ್ರೀ” ಪುರಸ್ಕೃತರಾದ ಎ. ಎಸ್. ಕಿರಣ್ ಕುಮಾರ್ ರವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಬುಧವಾರ, ಎಪ್ರಿಲ್ 29 ರಂದು ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ್ ರಾವ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಐಇಇಇ ಮಂಗಳೂರು ಉಪವಿಭಾಗದ ಅಧ್ಯಕ್ಷರಾದ ಡಾ. ವೇಣುಗೋಪಾಲ ಪಿ. ಎಸ್.. ಶ್ರೀನಿವಾಸ್ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರುಗಳಾದ ಶ್ರೀಮತಿ. ಎ. ವಿಜಯಲಕ್ಷ್ಮಿ ಆರ್. ರಾವ್ ಹಾಗೂ ಪ್ರೊ . ಎ. ಮಿತ್ರ ಎಸ್ ರಾವ್, ಶ್ರೀನಿವಾಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಕೆ. ಸತ್ಯನಾರಾಯಣ ರೆಡ್ಡಿ ಯವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಡಾ. ಆದಿತ್ಯ ಕುಮಾ‌ರ್ ಮಯ್ಯ (ರಿಜಿಸ್ಟ್ರಾರ್ ಅಕಾಡೆಮಿಕ್), ಡಾ. ಅನಿಲ್ ಕುಮಾರ್ (ರಿಜಿಸ್ಟ್ರಾರ್), ಡಾ. ಶ್ರೀನಿವಾಸ ಮಯ್ಯ ಡಿ. (ರಿಜಿಸ್ಟ್ರಾರ್ ಮೌಲ್ಯಮಾಪನ), ಡಾ. ಅಜಯ್ ಕುಮಾರ್ (ರಿಜಿಸ್ಟ್ರಾರ್ ಡೆವಲಪ್‌ಮೆಂಟ್), ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಎನ್ ಹೆಗಡೆ, ಸಂಚಾಲಕರಾದ ಪ್ರೊ. ಗೌರವ್ ಪ್ರಸಾದ್ ಉಪಸ್ಥಿತರಿರಲಿದ್ದಾರೆ.

ಈ 2 ದಿನಗಳ ಕಾಲ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಐಇಇಇ ಸಮ್ಮೇಳನವನ್ನು ಯಶಸ್ವಿಯಾಗಿ ಮತ್ತು ಸ್ಮರಣೀಯವಾಗಿಸುವ ಆಯೋಜಿಸುವ ಹಂಬಲದೊಂದಿಗೆ, ನಮ್ಮ ಈ ಕಾರ್ಯಕ್ರಮದ ಕುರಿತು ತಮ್ಮ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರವನ್ನು ನೀಡುವುದರ ಮೂಲಕ ತಾವು ಸಹಕಾರವನ್ನು ನೀಡಬೇಕು ಎಂದು ವಿನಂತಿಸುತ್ತಿದ್ದೇವೆ. ಬುಧವಾರ, ಎಪ್ರಿಲ್ 29 ರಂದು ಬೆಳಿಗ್ಗೆ 11 ಗಂಟೆಗೆ ಮುಕ್ಕದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ದಂತ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭಕ್ಕೆ ತಮ್ಮೆಲ್ಲರನ್ನು ಈ ಮೂಲಕ ಆಹ್ವಾನಿಸುತ್ತಿದ್ದೇವೆ. ತಾವೆಲ್ಲರೂ ನಮ್ಮ ಈ ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿ ವಿನಮ್ರ ವಿನಂತಿ.

ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದವರು:

ಡಾ. ರಾಮಕೃಷ್ಣ ಎನ್. ಹೆಗಡೆ (ಮುಖ್ಯಸ್ಥರು, ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ಮುಕ್ಕ), ಪ್ರೊ. ಗೌರವ್ ಪ್ರಸಾದ್ (ಸಂಚಾಲಕರು, ICESST 2026), ಡಾ. ರಾಮ ನರಸಿಂಹ (ಮುಖ್ಯಸ್ಥರು, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ), ಪ್ರೊ. ಶ್ರೀನಾಥ್ ರಾವ್ ಕೆ. (ಮುಖ್ಯಸ್ಥರು, ಸಿವಿಲ್ ಇಂಜಿನಿಯರಿಂಗ್ ವಿಭಾಗ)

LEAVE A REPLY

Please enter your comment!
Please enter your name here