ಮಂಗಳೂರು, ನಗರದ ಮಂಗಳಾದೇವಿ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಮಠದಲ್ಲಿ ಜೂನ್21, ರಂದುಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ರಾಮಕೃಷ್ಣ ಮಠ, ಮಂಗಳೂರು ಇಲ್ಲಿಯ ಬಾಲಕಾಶ್ರಮದ ವಾರ್ಡನ್ ಆಗಿರುವ ಸ್ವಾಮಿ ಯುಗೇಶಾನಂದಜಿ ಆಶೀರ್ವಚನದಲ್ಲಿ ಯೋಗ ವಿಜ್ಞಾನಎಂಬುದು ಸಾವಿರಾರು ವರ್ಷಗಳ ಹಳೆಯದು. ವೈದಿಕ ಕಾಲದಿಂದಲೂ ಭಾರತದಲ್ಲಿಯೋಗವನ್ನು ಪರಿಚಯಿಸಲಾಗಿದೆ.
ಇದು ಹಲವಾರು ವರ್ಷಗಳಿಂದ ಭಾರತೀಯರ ಜೀವನ ಶೈಲಿಯ ಒಂದು ಭಾಗವಾಗಿ ಉಳಿದಿದೆ. ಯೋಗವು ಭಾರತೀಯ ಸಂಸ್ಕöÈತಿ ಮತ್ತು ನಾಗರಿಕತೆಯಒಂದು ಪ್ರಮುಖ ಭಾಗವಾಗಿದೆ. ಇದರಲ್ಲಿ ಮಾನವೀಯತೆ ಮತ್ತುಆಧ್ಯಾತ್ಮಿಕಉನ್ನತಿಯ ಭೌತಿಕ ಅಂಶಗಳ ಗುಣಲಕ್ಷಣಗಳಿವೆ. ಪತಂಜಲಿ ಋಷಿಯವರುತಮ್ಮಯೋಗ ಶಾಸ್ತçದಲ್ಲಿ ಅಷ್ಟಾಂಗ ಯೋಗದ (ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧಾರಣಾಧ್ಯಾನ ಮತ್ತು ಸಮಾಧಿ) ತಿಳಿಸಿರುತ್ತಾರೆ. ಇಲ್ಲಿಯೋಗದ ಪ್ರಥಮ ಮೆಟ್ಟಿಲು, ದ್ವಿತೀಯ ಮೆಟ್ಟಿಲುಗಳಾದ ಯಮ, ನಿಯಮದ ಬಗ್ಗೆ ಅರಿತು, ತಿಳಿದು ವ್ಯಕ್ತಿ ತನ್ನ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಆಸನ ಕಲಿಯಲು ಸುಲಭವಾಗುತ್ತದೆ. ಯೋಗವು ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದೆ. ಇದು ಮನಸ್ಸು ಮತ್ತು ದೇಹದ ಏಕತೆಯನ್ನು ಸಾರುತ್ತದೆ ಎಂದು ತಿಳಿಸಿದರು.
ದೇಲಂಪಾಡಿಯೋಗ ಪ್ರತಿಷ್ಠಾನದÀ ಯೋಗಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರು ಶಿಬಿರಾರ್ಥಿಗಳಿಗೆ ಯೋಗ ಪರಿಚಯ ಯೋಗದ ಮಹತ್ವ ಮತ್ತು ಪ್ರಯೋಜನಗಳನ್ನು ತಿಳಿಸಿದರು. ಶ್ರೀ ದೇಲಂಪಾಡಿ ಶಿಷ್ಯರಾದ ಸುಶೀಲಾ ಕುಮಾರಿ ವಿ,ಸುಮಾ, ಕಾರ್ತಿಕ್, ಭಾರತಿ, ದೇವಿಪ್ರಸಾದ, ಶ್ರೀಲಕ್ಷ್ಮಿ ಕುಮಾರ್, ಹಾಗೂ ಚಂದ್ರಹಾಸ ಬಾಳ ಇವರು ಸಹಕರಿಸಿದರು. ಈ ಸಂದರ್ಭದಲ್ಲಿ ಯೋಗ ಗುರು ಶ್ರೀ ದೇಲಂಪಾಡಿಯವರಿಗೆ ಗುರುವಂದನೆ ಸಲ್ಲಿಸಲಾಯಿತು.

