ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಯುವ ಮೋರ್ಚಾ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

0
14

ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗಾಭ್ಯಾಸ ಪೂರಕ : ಕುತ್ಯಾರು ನವೀನ್ ಶೆಟ್ಟಿ

ಉಡುಪಿ : ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಪೂರಕವಾದ ಯೋಗದಿಂದ ಆರೋಗ್ಯಕರ ಜೀವನ ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾರತೀಯ ಯೋಗ ಪದ್ಧತಿಗೆ ವಿಶ್ವ ಮಾನ್ಯತೆ ಲಭಿಸಿದೆ. ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೇ ನಿತ್ಯ ನಿರಂತರವಾಗಿರಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಯುವ ಮೋರ್ಚಾ ಸಹಯೋಗದಲ್ಲಿ ಉಡುಪಿಯ ಹೋಟೆಲ್ ಕಿದಿಯೂರ್ ನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮಾಜಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಂದರ್, ಆರೋಗ್ಯ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಭಟ್ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಯೋಗ ಶಿಕ್ಷಕಿ ಮಮತಾ ಶೆಟ್ಟಿಗಾರ್ ಮಾರ್ಗದರ್ಶನದಲ್ಲಿ ಒಂದು ಗಂಟೆ ಕಾಲ ಸಾಮೂಹಿಕ ಯೋಗಾಭ್ಯಾಸ ನಡೆಯಿತು. ಸಹ ಶಿಕ್ಷಕ ಗಣೇಶ್ ಆಚಾರ್ಯ ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here