ಶ್ರೀ ವೆಂಕಟರಮಣ ಸ್ವಾಮಿ ಇಂಗ್ಲೀಷ್ ಮೀಡಿಯಂ ಶಾಲೆ ವಿದ್ಯಾಗಿರಿ ಬಂಟ್ವಾಳ, ಇಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ

0
5

ಬಂಟ್ವಾಳ : ಕಾರ್ಯಕ್ರಮದ ಅಂಗವಾಗಿ ದಿನಾಂಕ 20.06.2026 ಶನಿವಾರದಂದು ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಹರಿಪ್ರಸಾದ್ ಇವರು ಯೋಗ ದಿನದ ಸಾಮೂಹಿಕ ಪ್ರತಿಜ್ಞೆಯ ಮೂಲಕ ಕಾರ್ಯಕ್ರಮವನ್ನು ಆರಂಭಿಸಿದರು.

ಮುಖ್ಯ ಅತಿಥಿಗಳಾದ ಸಂಪನ್ಮೂಲ ವ್ಯಕ್ತಿ ಹಾಗೂ ನಮ್ಮ ಶಾಲೆಯ ಸಹಶಿಕ್ಷಕಿ ಸುಷ್ಮಾ ಕುಮಾರಿ ಇವರು ಸ್ವಸ್ಥ ಹಾಗೂ ಆರೋಗ್ಯಯುತ ಸಮಾಜಕ್ಕೆ ಯೋಗ ಮತ್ತು ಧ್ಯಾನದ ಅವಶ್ಯಕತೆಯನ್ನು ಯೋಗ ಪ್ರದರ್ಶನದ ಮೂಲಕ ತಿಳಿಸಿಕೊಟ್ಟರು. ವಿವಿಧ ಭಂಗಿಯ ಆಸನಗಳನ್ನು ವಿದ್ಯಾರ್ಥಿಗಳಿಂದ ಮತ್ತು ಶಿಕ್ಷಕರಿಂದ ಮಾಡಿಸಿದರು.

ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಚೈತ್ರಾ ಶೆಟ್ಟಿ ಮತ್ತು ಪೂರ್ವಪ್ರಾಥಮಿಕ ವಿಭಾಗದ ಸಂಯೋಜಕಿಯಾದ ವೀಣಾ ದೇವಾಡಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕುಮಾರಿ ಚಾರ್ವಿ ಎಲ್ ಪಿ ಇವರು ಸ್ವಾಗತಿಸಿ, ಕುಮಾರಿ ರಿಝ್ನಾ ಹಲೀಮಾ ವಂದಿಸಿ, ವಿದ್ಯಾರ್ಥಿನಿಯರಾದ ಕುಮಾರಿ ಆರ್ವಿ ಎಸ್ ಪೂಂಜ ಮತ್ತು ಮನ್ವಿತ್ ಎಮ್ ಶೆಟ್ಟಿಗಾರ್ ಇವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಾಲೆಯ ಶಿಕ್ಷಕರು ಭಾಗವಹಿಸಿದರು. ಶಾಲಾ ವಿದ್ಯಾರ್ಥಿನಿ ಕುಮಾರಿ ತನ್ವಿಶ್ರೀ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಗೆ ಮಾಡಿ ತೋರಿಸಿದರು.

LEAVE A REPLY

Please enter your comment!
Please enter your name here