ಬಂಟ್ವಾಳ: ಇರಾಕೋಡಿ ನಿವಾಸಿ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಹಲವು ವಿಚಾರಗಳು ಬೆಳಕಿಗೆ ಬಂದಿದೆ. ಪೊಲೀಸರು ಘಟನೆಯಲ್ಲಿ ಗಾಯಗೊಂಡ ಕಲಂದರ್ ಶಾಫಿ ನೀಡಿದ ಮಾಹಿತಿ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾರೆ.
ಆರು ಜನರ ತಂಡ ಅಬ್ದುಲ್ ರಹಿಮಾನ್ ಮೇಲೆ ದಾಳಿ ನಡೆಸಿದ್ದರು. ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದ ತಂಡವು ಅದಕ್ಕೂ ಮೊದಲು ಬಾರೊಂದರಲ್ಲಿ ಮದ್ಯ ಸೇವಿಸಿ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಎರಡು ಡಿಯೋ ದ್ವಿಚಕ್ರ ವಾಹನದಲ್ಲಿ ಮಾರಕಾಸ್ತ್ರಗಳೊಂದಿದ್ದ ಬಂದಿದ್ದ ದುಷ್ಕರ್ಮಿಗಳು ಕೃತ್ಯ ಎಸಗಿ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಳಿದ ಮೂವರು ಪ್ರಮುಖ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಪೂರ್ವ ದ್ವೇಷದ ಹತ್ಯೆ? ಅಬ್ದುಲ್ ರಹಿಮಾನ್ ಕೊಲೆಯ ಪ್ರಕರಣವನ್ನು ಪೊಲೀಸರು ಹಲವು ಆಯಾಮಗಳನ್ನು ತನಿಖೆ ನಡೆಸುತ್ತಿದ್ದಾರೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ನಡೆದು ಕೆಲವೇ ದಿನಗಳಾದ ಕಾರಣ ಇದು ಪ್ರತೀಕಾರದ ಹತ್ಯೆ ಎಂಬ ಅನುಮಾನವೂ ಎದುರಾಗಿತ್ತು. ಇದೇ ಸಮಯದಲ್ಲಿ ಇದು ಪೂರ್ವದ್ವೇಷದ ಹಿನ್ನೆಲೆಯಲ್ಲಿ ನಡೆದ ಘಟನೆ ಎಂದು ಪೊಲೀಸರ ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ.