ಸೆ. 14 ಕಳತ್ತೂರು 36 ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0
22

ಕಾಪು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜ್ಯೋತಿನಗರ, ಕಳತ್ತೂರು ಇದರ ಆಶ್ರಯದಲ್ಲಿ 36ನೇ ವರ್ಷದ ಗಣೇಶೋತ್ಸವವು ಸೆ.14ರಂದು ಜ್ಯೋತಿನಗರದ ಶ್ರೀ ಶೈಲಾ ಮಂಟಪದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯಲಿದೆ.

ಗಣೇಶೋತ್ಸವದ ಅಂಗವಾಗಿ ಶ್ರೀ ಗಣಪತಿ ದೇವರ ಪ್ರತಿಷ್ಠೆ, ವಿಶೇಷ ಪೂಜೆ, ಧಾರ್ಮಿಕ ವಿಧಿ ವಿಧಾನಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಉತ್ಸವದಲ್ಲಿ ಸ್ಥಳೀಯ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಇತ್ತೀಚೆಗೆ ಜ್ಯೋತಿನಗರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪ್ರಮುಖರಾದ ಅರುಣಾಕರ ಶೆಟ್ಟಿ ಕಳತ್ತೂರು, ರಾಘವೇಂದ್ರ ರಾವ್, ಬಾಲಕೃಷ್ಣರಾವ್ ಬಡಿಕೇರಿ, ರಮೇಶ್ ಉಪಾಧ್ಯಾಯ, ಸುದೀಪ್ ಕುಲಾಲ್, ಸಂತೋಷ್ ಕುಲಾಲ್, ರಾಜೇಶ್ ಕುಲಾಲ್, ಸೋಮನಾಥ್ ಕುಲಾಲ್, ಮಾಧವ ಮೂಲ್ಯ ಹಾಗೂ ಶಂಕರ್ ಮೂಲ್ಯ ಉಪಸ್ಥಿತರಿದ್ದರು.

36ನೇ ವರ್ಷದ ಗಣೇಶೋತ್ಸವವನ್ನು ಯಶಸ್ವಿಯಾಗಿ ನಡೆಸಲು ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದು, ಭಕ್ತರು ಮತ್ತು ಸಾರ್ವಜನಿಕರು ಉತ್ಸವದಲ್ಲಿ ಪಾಲ್ಗೊಂಡು ಸಹಕರಿಸುವಂತೆ ಸಮಿತಿ ಮನವಿ ಮಾಡಿದೆ.