ಹೆಬ್ರಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಬ್ಬಿನಾಲೆ, ಹೆಬ್ರಿ ಇದರ ವತಿಯಿಂದ ಆಯೋಜಿಸಲಾಗುತ್ತಿರುವ 40ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ.31ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರ, ಕೆಳಮಠ ಕಬ್ಬಿನಾಲೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಗಣೇಶೋತ್ಸವದ ವಿವಿಧ ಕಾರ್ಯಕ್ರಮಗಳ ಕುರಿತು ಸಮಿತಿ ಸದಸ್ಯರು ಚರ್ಚಿಸಿ, ಉತ್ಸವವನ್ನು ಸಾಂಪ್ರದಾಯಿಕವಾಗಿ ಹಾಗೂ ಶ್ರದ್ಧಾಭಕ್ತಿಯಿಂದ ಯಶಸ್ವಿಯಾಗಿ ನಡೆಸುವ ಕುರಿತು ಯೋಜನೆ ರೂಪಿಸಲಾಯಿತು. 40ನೇ ವರ್ಷದ ಗಣೇಶೋತ್ಸವವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹಾಗೂ ಗ್ರಾಮಸ್ಥರು ಪಾಲ್ಗೊಂಡು ಉತ್ಸವವನ್ನು ಯಶಸ್ವಿಗೊಳಿಸುವಂತೆ ಸಮಿತಿ ವತಿಯಿಂದ ಮನವಿ ಮಾಡಲಾಯಿತು.
ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ, ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
