ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ 70ನೇ ವರ್ಷದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಿಕ್ಷಣ ಸೇರಿದಂತೆ, ಕಲೆ, ಸಾಹಿತ್ಯ, ಸಂಗೀತ, ಸಮಾಜ ಸೇವೆಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ “ಕರ್ನಾಟಕ ಸಿರಿಗನ್ನಡ ಸಿರಿ” ರಾಜ್ಯ ಪ್ರಶಸ್ತಿಗೆ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಈ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದವರನ್ನು ಸಮಾರಂಭದ ಪ್ರತ್ಯೇಕ ವೇದಿಕೆಯಲ್ಲಿ ಕಲಾಕುಂಚದ ಮು ದೆಯರು ಕನ್ನಡ ತಿಲಕವಿಟ್ಟು, ಕನ್ನಡ ಕಂಕಣ ಕಟ್ಟಿ, ಕನ್ನಡಾರತಿ ಬೆಳಗಿ, ಪುಷ್ಪವೃಷ್ಠಿಯೊಂದಿಗೆ ಗೌರವಿಸುತ್ತಾರೆ. ನಂತರ ಅವರದೇ ಭಾವಚಿತ್ರವಿರುವ ಸನ್ಮಾನಪತ್ರ, ಕನ್ನಡ ಪೇಟದೊಂದಿಗೆ ಹಾರ, ಶಾಲು, ಕನ್ನಡತಾಯಿ ಭುವನೇಶ್ವರಿಯ ಸ್ಮರಣಿಕೆ ಚಿನ್ನದ ಲೇಪನದ ಪದಕ ಕೊರಳಿಗೆ ಹಾಕಿ ಸನ್ಮಾನಿಸಲಾಗುವುದು ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್ ಪ್ರಕಟಿಸಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು ಹೆಚ್ಚಿನ ಮಾಹಿತಿಗೆ 9538732777 ಈ ವ್ಯಾಟ್ಸಪ್ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.
.