
ಬಂಟ್ವಾಳ : ಸಜೀಪಮಾಗಣೆ ಕಾಳಾ ದ್ರಿಸಾನಿಧ್ಯ ಬಿಲ್ಲಂ ಪದವು ಶ್ರೀ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಒಂದು ತಿಂಗಳ ಕಾಲ ನಡೆಯಲಿರುವ ದೀಪೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ನೀಲೇಶ್ವರ ಕೆ. ಉಚ್ಚಿಲ ತಾಯ ಪದ್ಮನಾಭ ತಂತ್ರಿಗಳಿಗೆ ಗೌರವಪೂರ್ವಕವಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಸಜೀಪಮಾಗಣೆ ತಂತ್ರಿ ಎಂ. ಸುಬ್ರಮಣ್ಯ ಭಟ್, ಮುಳ್ಳುಂಜ ವೆಂಕಟೇಶ್ವರ ಭಟ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರವೀಣ್ ಆಳ್ವ, ಕಿಶನ್ ಸೇಣವ, ರಾಮ ಬರೆ ಮೊದಲಾದವರು ಉಪಸ್ಥಿತರಿದ್ದರು.
ಕಾರ್ತಿಕ ಮಾಸದ ಪವಿತ್ರ ಸಂದರ್ಭದಲ್ಲಿ ಶ್ರೀ ಕ್ಷೇತ್ರದಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ದೀಪೋತ್ಸವವು ಧಾರ್ಮಿಕ ಶ್ರದ್ಧೆ ಹಾಗೂ ಭಕ್ತಿಭಾವದೊಂದಿಗೆ ನೆರವೇರಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
