ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದಿಂದ “ಸರಸ್ವತಿ ಕನ್ನಡ ರತ್ನ” ರಾಜ್ಯ ಪ್ರಶಸ್ತಿಗೆ ಆಹ್ವಾನ

0
54

ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಮತ್ತು ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ವಿವಿಧ ಕ್ಷೇತ್ರಗಳ್ಲಿ ಸಾಧನೆ ಮಾಡುತ್ತಿರುವ ಹಿರಿಯರಿಗೆ, ಕಿರಿಯರಿಗೆ “ಸರಸ್ವತಿ ಕನ್ನಡ ರತ್ನ” ರಾಜ್ಯ ಪ್ರಶಸ್ತಿ ಪ್ರದಾನಕ್ಕೆ ಆಹ್ವಾನಿಸಲಾಗಿದೆ ಎಂದು ಸಂಸ್ಥೆಗಳ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ಕಲೆ, ಸಾಹಿತ್ಯ, ಸಂಗೀತ, ಶಿಕ್ಷಣ, ರಂಗಭೂಮಿ, ಜಾನಪದಕಲೆ, ಸಮಾಜಸೇವೆ, ಸಾಂಸ್ಕೃತಿಕ ಚಟುವಟಿಕೆ ಮುಂತಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು 31-03-2026 ರೊಳಗೆ ಈ ಕೆಳಗಿನ ಸನೀಹವಾಣಿಗೆ ಸಂಪರ್ಕಿಸಬಹುದು ಎಂದು ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್ ಪ್ರಕಟಿಸಿದ್ದಾರೆ.

ಸನ್ಮಾನಕ್ಕೆ ಆಯ್ಕೆ ಆದವರ ಸಾಧಕರನ್ನು ಸಮಾರಂಭದ ಪ್ರತ್ಯೇಕ ವೇದಿಕೆಯಲ್ಲಿ ಕಲಾಕುಂಚದ ಮುತ್ತೆöÊದೆಯರು ಕನ್ನಡ ತಿಲಕವಿಟ್ಟು, ಕನ್ನಡ ಕಂಕಣ ಕಟ್ಟಿ, ಕನ್ನಡಾರತಿ ಬೆಳಗಿ, ಪುಷ್ಪ ವೃಷ್ಟಿಯೊಂದಿಗೆ ಗೌರವಿಸುತ್ತಾರೆ.

ನಂತರ ಅವರದೇ ಭಾವಚಿತ್ರವಿರುವ ಸನ್ಮಾನ ಪತ್ರ ಮುದ್ರಿಸಿ, ಪ್ರೇಂ ಮಾಡಿ, ವೇದಿಕೆಯ ಸಿಂಹಾಸನದ ಮೇಲೆ ಕೂರಿಸಿ, ಕನ್ನಡ ಪೇಟಾದೊಂದಿಗೆ ಹಾರ, ಶಾಲು ಕನ್ನಡ ತಾಯಿ ಭುವನೇಶ್ವರಿಯ ಸ್ಮರಣಿಕೆ ಚಿನ್ನದ ಲೇಪನದ ಪದಕ ಕೊರಳಿಗೆ ಹಾಕಿ ಗೌರವಿಸುತ್ತಾರೆ ಹೆಚ್ಚಿನ ಮಾಹಿತಿಗೆ 9538732777 ಈ ಸನೀಹವಾಣಿಗೆ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here