ಕಲಾಕುಂಚದಿಂದ ದಸರಾ ಪ್ರಯುಕ್ತ ರಾಜ್ಯ ಮಟ್ಟದ ಉಚಿತ ಸ್ಪರ್ಧೆಗೆ ಆಹ್ವಾನ

0
9

ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ದಸರಾ ಪ್ರಯುಕ್ತ ರಾಜ್ಯ ಮಟ್ಟದ ಉಚಿತ ಸ್ಪರ್ಧೆಗೆ ಆಹ್ವಾನಿಸಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಲಕ್ಷ್ಮಣ್ ರಾಯ್ಕರ್ ತಿಳಿಸಿದ್ದಾರೆ.

ಮೈಸೂರು ದಸರಾ ಬಗ್ಗೆ ಎರಡು ಪುಟಗಳಲ್ಲಿ ಪ್ರಬಂಧ ಬರೆದು ಈ ಕೆಳಗಿನ ಕಲಾಕುಂಚ ಕಛೇರಿ ವಿಳಾಸಕ್ಕೆ 31-10-2026 ರೊಳಗೆ ಅಂಚೆ ಮೂಲಕ ಕಳಿಸಬೇಕಾಗಿ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಿಸಿದ್ದಾರೆ.

ಪ್ರಬಂಧ ಬರೆದು ಕಳಿಸುವ ವಿಳಾಸ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ #588, “ಕನ್ನಡ ಕೃಪಾ” ಕುವೆಂಪು ರಸ್ತೆ, ಕೆ.ಬಿ.ಬಡಾವಣೆ, ದಾವಣಗೆರೆ-577002. ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಸನೀಹವಾಣಿಗೆ ಸಂಪರ್ಕಿಸಬೇಕಾಗಿ ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ. ಸನೀಹವಾಣಿಗಳು 9538732777, 9945785170