ಶ್ರೀ ಕಾಳಾದ್ರಿ ಸಾನಿಧ್ಯ ಬಿಲ್ಲ ಪದವು ಸಜೀಪ ಶ್ರೀ ಕ್ಷೇತ್ರದಲ್ಲಿ21/10/2025 ರಿಂದ20/11/2025 ತನಕ ಕಾರ್ತಿಕ ದೀಪಾರಾಧನೆ ನಡೆಯಲಿದ್ದು ಕಾರ್ತಿಕ ದೀಪೋತ್ಸವದ ಆಮಂತ್ರಣ ಪತ್ರವನ್ನು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಜಿಲ್ಲಾ ಕೇಂದ್ರ ಸರಕಾರಿ ಬ್ಯಾಂಕ್ ನಿರ್ದೇಶಕ ರಾಜಾರಾಮ ಭಟ್ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುo ಜವೆಂಕಟೇಶ್ವರ ಭಟ್ ಅರ್ಚಕ ಗಣಪತಿ ಮಹಾಬಲೇಶ್ವರ ಭಟ್ ನೌಕಾದಳ ನಿವೃತ್ತ ಸೇನಾ ಕಮಾಂಡರ್ ವಸಂತ ರಾವ್ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ ರಾಧಾಕೃಷ್ಣ ಆಳ್ವ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರವೀಣ್ ಆಳ್ವ ಸುಧಾಕರ ಚೀಟಿ ಪ್ರವೀಣ್ ಬಂಡಾರಿ ಸುಭಾಷ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

