ಉಡುಪಿ : ಸೆಪ್ಟೆಂಬರ್ 6 ರಂದು ನಡೆಯಲಿರುವ ‘ದುಂಡಿ 70’ ಅಭಿನಂದನಾ ಸಮಾರಂಭ ಹಾಗೂ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ನಡದ ಹಿರಿಯ ಸಾಹಿತಿಗಳಲ್ಲಿ ಒಬ್ಬರಾಗಿರುವ ಕು.ಗೋ ಅವರು ಇಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ವಿಶ್ವನಾಥ್ ಶೆಣೈ, ಅಧ್ಯಕ್ಷರಾದ ಪ್ರೊ. ಶಂಕರ್, ಹಿರಿಯ ಸಾಹಿತಿ ಸೂರಾಲು ನಾರಾಯಣ ಮಡಿ, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ. ಉಪಸ್ಥಿತರಿದ್ದರು.

