
ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ 36ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ 2027ನೇ ಜನವರಿ 17ನೇ ತಾರೀಖು ಭಾನುವಾರದಂದು ದಾವಣಗೆರೆಯ ರೋಟರಿ ಬಾಲ ಭವನದಲ್ಲಿ ರಾಜ್ಯ ಮಟ್ಟದ ಉಚಿತ ಕವಿಗೋಷ್ಠಿ ಮತ್ತು ಹಿರಿಯರಿಗೆ, ಕಿರಿಯರಿಗೆ ಉಚಿತ ಚಿತ್ರ ಬರೆಯುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಹಿರಿಯರಿಗೆ, ಕಿರಿಯರಿಗೆ ರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಭಾಗವಹಿಸುವವರು 9743377517 ಈ ಸನೀಹವಾಣಿಗೆ ಹೆಸರು ನೊಂದಾಯಿಸಬೇಕು. ಚಿತ್ರ ಬರೆಯುವವರು 9731062936 ಈ ಸನೀಹವಾಣಿಗೆ ಹೆಸರು ನೊಂದಾಯಿಸಬೇಕು ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಎಲ್. ರಾಯ್ಕರ್ ಪ್ರಕಟಿಸಿದ್ದಾರೆ.
ಈ ಸಂಸ್ಥೆಯ 36ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಯಶಸ್ವಿಗೊಳಿಸಬೇಕು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.
ಹೆಸರು ನೊಂದಾಯಿಸುವ ಕೊನೆಯ ದಿನಾಂಕ 31-12-2026
