ದಾವಣಗೆರೆ-:ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದಿನಾಂಕ ೨೪-೦೧-೨೦೨೫ನೇ ಶುಕ್ರವಾರದಂದು ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀAದ್ರ ತೀರ್ಥ ಗುರುವರ್ಯರ ದಿವ್ಯ ಸಾನಿಧ್ಯದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ ಉಚಿತವಾಗಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ವೆಂಕಟರಮಣ ದೇವಸ್ಥಾನದ ವ್ಯವಸ್ಥಾಪಕರಾದ ಅಡಿಗ ಬಾಲಕೃಷ್ಣ ಶೆಣೈ ತಿಳಿಸಿದ್ದಾರೆ.
ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ವಟುಗಳ ಪೋಷಕರು ದಿನಾಂಕ ೦೫-೧-೨೦೨೫ರೊಳಗೆ ಈ ಕೆಳಗಿನ ಸನೀಹವಾಣಿಗಳಿಗೆ ಸಂಪರ್ಕಿಸಿ ಹೆಸರು ನೊಂದಾಯಿಸಬೇಕಾಗಿ ದಾವಣಗೆರೆಯ ಗೌಡ ಸಾರಸ್ವತ ಸಮಾಜದ ಮಾಜಿ ಅಧ್ಯಕ್ಷರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ೯೪೪೮೧೩೫೯೫೦, ೯೭೩೧೪೩೭೬೨೮ ಈ ಸನೀಹವಾಣಿಗಳಿಗೆ ಸಂಪರ್ಕಿಸಬಹುದು.